ETV Bharat / bharat

ಚೀನಾ-ಭಾರತ ಗಡಿ ವಿವಾದ: ದೇಶವನ್ನು ಏಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ... ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ - ಜೈರಾಮ್​ ರಮೇಶ್​

ಇಂಡೋನೇಷ್ಯಾದ ನಡೆದ ಜಿ20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಅವರೊಂದಿಗೆ ಪ್ರಧಾನಿ ಹಸ್ತಲಾಘವ ಮಾಡಿದ ನಂತರ ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದಲ್ಲಿ ಏಕೆ ಚೀನಾ ಸೇನೆ ಆಕ್ರಮಣ ನಡೆಸಿದೆ ಎಂದು ಕಾಂಗ್ರೆಸ್​ ಹಿರಿಯ ನಾಯಕ ಜೈರಾಮ್​ ರಮೇಶ್​ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್ Jairam Ramesh
ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್
author img

By

Published : Dec 17, 2022, 10:03 PM IST

ನವದೆಹಲಿ: ಮನ್ ಕಿ ಬಾತ್​ನಲ್ಲಿ ಪ್ರಶ್ನೆಗಳಿಗೆ ಉತ್ತರ ನೀಡುವುದು ಪ್ರಧಾನಿಯ ರಾಜಕೀಯ ಕರ್ತವ್ಯ ಮತ್ತು ನೈತಿಕ ಜವಾಬ್ದಾರಿಯಾಗಿದೆ. ದೇಶವು ಗಡಿ ವಿಚಾರದ ಬಗ್ಗೆ ತಿಳಿದುಕೊಳ್ಳಲು ಬಯಸುತ್ತದೆ. ನೀವು ದೇಶವನ್ನು ಏಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ? ಎಂದು ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಆಕ್ರಮಣದ ಕುರಿತು ಪ್ರಧಾನಿ ಮೋದಿಗೆ ಕಾಂಗ್ರೆಸ್​ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಭಾನುವಾರ ಪ್ರಸಾರವಾಗುವ ಪ್ರಧಾನಿಯವರ ಬಾನುಲಿ ಕಾರ್ಯಕ್ರಮ 'ಮನ್ ಕಿ ಬಾತ್' ಕುರಿತು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ, 2020ರಲ್ಲಿ ಪೀಪಲ್ಸ್ ಲಿಬರೇಶನ್ ಆರ್ಮಿಯು ಪೂರ್ವ ಲಡಾಖ್‌ನಲ್ಲಿ ವಾಸ್ತವಿಕ ಗಡಿಯಾದ ನೈಜ ನಿಯಂತ್ರಣ ರೇಖೆಯನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದಾಗ ಚೀನಾಕ್ಕೆ ಕ್ಲೀನ್ ಚಿಟ್ ಕೊಟ್ಟಿದನ್ನು ಪ್ರಧಾನಿಗೆ ನೆನಪಿಸಿದ್ದಾರೆ. ಜೂನ್ 20, 2020 ರಂದು ಪೂರ್ವ ಲಡಾಖ್‌ನಲ್ಲಿ ಚೀನಾದಿಂದ ಭಾರತದ ಭೂಪ್ರದೇಶಕ್ಕೆ ಯಾವುದೇ ಆಕ್ರಮಣ ನಡೆದಿಲ್ಲ ಎಂದು ಏಕೆ ಹೇಳಿದ್ದೀರಿ ಎಂದು ಸರ್ಕಾರಕ್ಕೆ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಪಿಎಂ ಕೇರ್​ ನಿಧಿಗೆ ಚೀನಾ ಕಂಪನಿಗಳು ದೇಣಿಗೆ ನೀಡಲು ಮತ್ತು ದ್ವಿಪಕ್ಷೀಯ ವ್ಯಾಪಾರದ ಲಾಭ ಪಡೆಯಲು ಚೀನಾಕ್ಕೆ ಏಕೆ ಅನುಮತಿ ನೀಡಿದ್ದೀರಿ ಎಂದು ಕೂಡ ಪ್ರಧಾನಿಯನ್ನು ಕೇಳಿದ್ದಾರೆ. ಕಳೆದ ಒಂದು ವರ್ಷದಲ್ಲಿ ಪ್ರಧಾನಿ ಮೋದಿಯವರು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು 18 ಬಾರಿ ಭೇಟಿಯಾಗಿದ್ದಾರೆ ಮತ್ತು ಇತ್ತೀಚೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲೂ ಸಹ ಅವರೊಂದಿಗೆ ಹಸ್ತಲಾಘವ ಮಾಡಿದ್ದಾರೆ. ಆ ಬಳಿಕ ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆ ಆಕ್ರಮಣ ನಡೆಸಿದೆ ಎಂದು ಹೇಳಿದರು.

ಇದನ್ನೂ ಓದಿ: ಗಡಿ ಪ್ರದೇಶಗಳ ರಕ್ಷಣೆ ಕೇವಲ ಕೇಂದ್ರದ ಜವಾಬ್ದಾರಿಯಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.