ನೋಯ್ಡಾ(ಉತ್ತರ ಪ್ರದೇಶ): ಕಳೆದ ಮೂರು ವರ್ಷಗಳ ಹಿಂದೆ ಒಟ್ಟಿಗೆ ಬಾಳುವುದಾಗಿ ಪ್ರತಿಜ್ಞೆ ಮಾಡಿ, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಪತಿ-ಪತ್ನಿ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿರುವ ಹೃದಯವಿದ್ರಾವಕ ಘಟನೆ ನೋಯ್ಡಾದ ಸೆಕ್ಟರ್ 22 ಪ್ರದೇಶದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 22 ಪ್ರದೇಶದಲ್ಲಿ ಕಳೆದ 8 ವರ್ಷಗಳಿಂದ ಬಾಡಿಗೆ ಮನೆ ಮಾಡಿಕೊಂಡು ಜೀವನ ನಡೆಸುತ್ತಿದ್ದ 34 ವರ್ಷದ ಅರುಣ್ ಮೂರು ವರ್ಷಗಳ ಹಿಂದೆ ಶಶಿಕಲಾ ಎಂಬ ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದರು. ಮೂಲತಃ ಸೋನಭದ್ರ ನಿವಾಸಿಯಾಗಿದ್ದ ಅರುಣ್, ಖಾಸಗಿ ಕಂಪನಿವೊಂದರಲ್ಲಿ ತಂತ್ರಜ್ಞನಾಗಿ ಕೆಲಸ ಮಾಡ್ತಿದ್ದರು. ಇತ್ತೀಚೆಗೆ ಅರುಣ್ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವ ಕಾರಣ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ವೇಳೆ ಕೊನೆಯ ಹಂತದ ಕ್ಯಾನ್ಸರ್ ಇರುವುದು ಗೊತ್ತಾಗಿದೆ. ಹೀಗಾಗಿ, ಅರುಣ್-ಶಶಿಕಲಾ ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದಾರೆ. ಇದರ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗುವ ಬಗ್ಗೆ ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ: ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಬೈಕ್.. ತೂರಿಬಿದ್ದು ಕಾರ್ಗೆ ಡಿಕ್ಕಿ ಹೊಡೆದ ತಾಯಿ-ಮಗ!
ಅರುಣ್ಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತಿದ್ದಂತೆ ಸೂಸೈಡ್ ನೋಟ್ ಬರೆದಿಟ್ಟಿರುವ ಇವರು, ನೇಣಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ತಾವೇ ಕಾರಣ ಎಂಬುದನ್ನ ಅದರೊಳಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿ ತಮ್ಮ ಕುಟುಂಬಸ್ಥರ ಮೊಬೈಲ್ ನಂಬರ್ ಬರೆದಿಟ್ಟಿದ್ದು, ಅವರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನೋಯ್ಡಾ ಎಸಿಪಿ ರಜನೀಶ್ ವರ್ಮಾ, ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಸೂಸೈಡ್ ನೋಟ್ ಸಿಕ್ಕಿದೆ. ಇದರಲ್ಲಿ ಗಂಡನಿಗೆ ಕ್ಯಾನ್ಸರ್ ಇರುವ ಬಗ್ಗೆ ತಿಳಿಸಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖ ಮಾಡಿರುವ ಮೊಬೈಲ್ ನಂಬರ್ಗೆ ಫೋನ್ ಮಾಡಿ, ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.