ನವದೆಹಲಿ: ಇಬ್ಬರು ಕಾರ್ಯಕಾರಿ ಅಧ್ಯಕ್ಷರೊಂದಿಗೆ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥರನ್ನು ನೇಮಿಸುವ ಸೂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಹೆಣೆದಿದೆ ಎಂದು ಮೂಲಗಳು ತಿಳಿಸಿವೆ.
ನವಜೋತ್ ಸಿಂಗ್ ಸಿಧು ಈ ಹುದ್ದೆಗೆ ಮುಂಚೂಣಿಯಲ್ಲಿರುವವರಲ್ಲಿ ಒಬ್ಬರಾಗಿದ್ದರೆ, ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಜಾತಿ ಮತ್ತು ಸಮುದಾಯದ ವಿಷಯದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಹೈಕಮಾಂಡ್ ಈ ಸೂತ್ರಕ್ಕೆ ಮೊರೆ ಹೋಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮುಂದಿನ 2-3 ದಿನಗಳಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಪಕ್ಷ ಮುಂದಾಗಿದೆ. ಆದರೆ, ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಬುಧವಾರ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಸಭೆ ನಿಗದಿಯಾಗಿತ್ತು. ಆದರೆ, ಕಾರಣಾಂತರಗಳಿಂದ ರಾಹುಲ್ ಗಾಂಧಿ ಸಭೆಯನ್ನು ಮುಂದೂಡಿದ್ದಾರೆ.
ಗುರುವಾರ ಸಭೆ ನಡೆಸುವಂತೆ ನಾನು ವಿನಂತಿಸುತ್ತೇನೆ. ಇಂದು ಪಂಜಾಬ್ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಹುಲ್ ಗಾಂಧಿ ನಿವಾಸದಿಂದ ಹಿಂದಿರುಗುವಾಗ ಹರೀಶ್ ರಾವತ್ ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಮುಖ ನಾಯಕರ ಸಭೆ ಕರೆದ ಸಭಾಧ್ಯಕ್ಷ ವೆಂಕಯ್ಯನಾಯ್ಡು