ಮುಂಬೈ( ಮಹಾರಾಷ್ಟ್ರ) : ಮಹಾರಾಷ್ಟ್ರ ಮತ್ತು ಕರ್ನಾಟಕ ಎರಡರ ಸಮನ್ವಯದೊಂದಿಗೆ ಪ್ರವಾಹ ನಿಯಂತ್ರಣ ಕಾರ್ಯವನ್ನು ಹೇಗೆ ಸುಧಾರಿಸಬಹುದು ಎಂಬ ಬಗ್ಗೆ ನಾಳೆ ಬೆಳಗ್ಗೆ 10.30 ಕ್ಕೆ ಸಭೆ ನಡೆಯಲಿದೆ.
ಆಲಮಟ್ಟಿ ಅಣೆಕಟ್ಟೆಯಿಂದ ನೀರನ್ನು ಹೊರಹಾಕುವುದರಿಂದ ಪ್ರವಾಹ ಉಂಟಾಗುತ್ತದೆ. ಈ ಹಿನ್ನೆಲೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಎರಡೂ ರಾಜ್ಯಗಳ ನಡುವಿನ ಪ್ರವಾಹ ನಿಯಂತ್ರಣ ಕಾರ್ಯವನ್ನು ಸಮನ್ವಯಗೊಳಿಸಲು ಶನಿವಾರ ಬೆಳಗ್ಗೆ 10.30ಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಭೆ ನಡೆಯಲಿದೆ ಎಂದು ಎನ್‌ಸಿಪಿ ರಾಜ್ಯ ಅಧ್ಯಕ್ಷ ಮತ್ತು ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ತಿಳಿಸಿದ್ದಾರೆ.
ಸಬೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಯಲಿದೆ. ಇದು ಕರ್ನಾಟಕದ ಮುಖ್ಯಮಂತ್ರಿಯೊಂದಿಗೆ ನೇರ ಚರ್ಚೆಯಾಗಲಿದ್ದು, ಮಹಾರಾಷ್ಟ್ರದ ಕೃಷ್ಣ ಕಣಿವೆ ಮತ್ತು ಕರ್ನಾಟಕದ ಕೃಷ್ಣ ಕಣಿವೆಯ ಜನರಿಗೆ ಆಗುವ ಹಾನಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ ಮತ್ತು ಎರಡೂ ರಾಜ್ಯಗಳ ಸಮನ್ವಯದೊಂದಿಗೆ ಪ್ರವಾಹ ನಿಯಂತ್ರಣ ಕಾರ್ಯಗಳನ್ನು ಸುಧಾರಿಸಲಾಗುವುದು ಎಂದು ಜಯಂತ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಕಾರ್ಯದರ್ಶಿ ಮಟ್ಟದಲ್ಲಿ ಸಭೆ ನಡೆಸಲಾಗಿತ್ತು. ಈಗ ಸಚಿವರ ಮಟ್ಟದಲ್ಲಿ ಸಭೆ ನಡೆಯುತ್ತಿದೆ ಎಂದು ಜಯಂತ್ ಪಾಟೀಲ್ ತಿಳಿಸಿದ್ದಾರೆ.