ETV Bharat / bharat

'ಪ್ರಧಾನಿ ಮೋದಿಗೆ ಮಾತ್ರ ಬೆಂಬಲ.. ನಿತೀಶ್, ಸುಶೀಲ್ ಮೋದಿಗಲ್ಲ' - ಸುಶೀಲ್ ಮೋದಿಗೆ ಚಿರಾಗ್ ಪಾಸ್ವಾನ್ ಬೆಂಬಲ

ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಪರಾಭವಗೊಂಡ ಬಳಿಕ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಫಲಿತಾಂಶದ ನಂತರದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

chirag paswan
ಚಿರಾಗ್ ಪಾಸ್ವಾನ್
author img

By

Published : Nov 11, 2020, 4:38 PM IST

ಪಾಟ್ನಾ (ಬಿಹಾರ): ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಜಯಗಳಿಸಿದ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ರಾಜ್ಯದಲ್ಲಿ ಜೆಡಿಯು ಮತ್ತು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ಕೇಂದ್ರದಲ್ಲಿ ಪ್ರಧಾನಿ ಮೋದಿಗೆ ಮಾತ್ರ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

2020ರ ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರ ನಾವು ಎಂದಿಗೂ ನಿತೀಶ್ ಕುಮಾರ್ ಹಾಗೂ ಸುಶೀಲ್ ಮೋದಿ ಅವರನ್ನು ಬೆಂಬಲಿಸುವುದಿಲ್ಲ. ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್​ ಮುಂದುವರೆಯಲು ನನ್ನಿಂದ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ. ಆದರೆ ಕೇಂದ್ರ ಬಿಜೆಪಿ ನನ್ನ ಬೆಂಬಲ ಮುಂದುವರೆಯುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕೇವಲ ಒಂದು ಸ್ಥಾನದಲ್ಲಿ ಜಯಗಳಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಕೆಲವು ಸಮಸ್ಯೆಗಳ ನಡುವೆಯೂ ನಮ್ಮ ಸಾಧನೆ ತೃಪ್ತಿಕರವಾಗಿದೆ. ಈ ಜನಾದೇಶ 2025ರ ಚುನಾವಣೆಯಲ್ಲಿ ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಸ್ಪಷ್ಟವಾಗಿ ಸೂಚಿಸುತ್ತಿದೆ ಎಂದಿದ್ದಾರೆ.

ಇದರ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ನಾವು ಗೆಲುವಿನ ಸಮೀಪದಲ್ಲಿದ್ದೆವು. ನಮ್ಮ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದೆ ಎಂದಷ್ಟೇ ಹೇಳಬಲ್ಲೇ ಎಂದು ಚಿರಾಗ್ ಪಾಸ್ವಾನ್ ಅಭಿಪ್ರಾಯಪಟ್ಟಿದ್ದು, ಚುನಾವಣೆಯಲ್ಲಿ ಹೋರಾಡಲು ಧೈರ್ಯ ತೋರಿದ ಬೆಂಬಲಿಗರು ಹಾಗೂ ಅಭ್ಯರ್ಥಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ತೇಜಸ್ವಿ ಯಾದವ್ ಅವರ ಪಕ್ಷಕ್ಕೂ ಬೆಂಬಲ ನೀಡುವುದಕ್ಕೆ ನಿರಾಕರಿಸಿದ ಚಿರಾಗ್ ಪಾಸ್ವಾನ್ ಸುಮಾರು 25 ಲಕ್ಷ ಮತದಾರರು ಅಂದ್ರೆ ಶೇಕಡಾ 6ರಷ್ಟು ಮತಗಳನ್ನು ಗಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜಕುಮಾರ್ ಸಿಂಗ್ ಮತಿಹಾನಿ ಕ್ಷೇತ್ರದಿಂದ ಜೆಡಿಯುನ ನರೇಂದ್ರ ಕುಮಾರ್ ಸಿಂಗ್ ಅವರನ್ನು ಸೋಲಿಸುವ ಮೂಲಕ ರಾಜ್ಯದಲ್ಲಿ ಲೋಕ ಜನಶಕ್ತಿ ಪಕ್ಷ ಒಂದೇ ಒಂದು ಸ್ಥಾನ ಗಳಿಸಿಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.