ETV Bharat / bharat

ಸ್ಮೃತಿ ಇರಾನಿ ಮಗಳ ಅಕ್ರಮ ಬಾರ್​ ಆರೋಪ: 'ಕೈ' ನಾಯಕರಿಗೆ ದೆಹಲಿ ಹೈಕೋರ್ಟ್​ ಸಮನ್ಸ್​, ಪೋಸ್ಟ್ ಡಿಲೀಟ್ ಮಾಡಲು ಸೂಚನೆ - ಈಟಿವಿ ಭಾರತ ಕನ್ನಡ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಮಗಳು ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆಂದು ಕಾಂಗ್ರೆಸ್​ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇದೀಗ ಸಮನ್ಸ್ ಜಾರಿ ಮಾಡಿದೆ.

Union Minister Smriti Irani's daughter
Union Minister Smriti Irani's daughter
author img

By

Published : Jul 29, 2022, 3:05 PM IST

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್​ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ ಸಮನ್ಸ್ ಜಾರಿ ಮಾಡಿದ್ದು, ಉತ್ತರ ನೀಡುವಂತೆ ತಿಳಿಸಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚನೆ ನೀಡಿದೆ.

ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್​ ,ಪವನ್ ಖೇರಾ ಮತ್ತು ನೆಟ್ಟ ಡಿಸೋಜಾ ಅವರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಅಕ್ರಮ ಬಾರ್​ಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿದೆ.

ತಮ್ಮ ಮಗಳ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ನ್ಯಾಯಾಯಲದ ಮುಂದೆ ಸತ್ಯವನ್ನ ಹೇಳಲು ಕಾಯುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

  • The Delhi High Court has issued notice asking us to formally reply to the case filed by Smriti Irani. We look forward to presenting the facts before the court. We will challenge and disprove the spin being put out by Ms. Irani.

    — Jairam Ramesh (@Jairam_Ramesh) July 29, 2022 " class="align-text-top noRightClick twitterSection" data=" ">

ಇದನ್ನೂ ಓದಿರಿ: ಗೋವಾದಲ್ಲಿ ಸ್ಮೃತಿ ಇರಾನಿ ಪುತ್ರಿಯಿಂದ ಅಕ್ರಮ ಬಾರ್​​.. ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಸಚಿವೆ ಹೇಳಿದ್ದೇನು!?

ಕಳೆದ ಎರಡು ದಿನಗಳ ಹಿಂದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್​ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಜೊತೆಗೆ ಸಚಿವ ಸ್ಥಾನದಿಂದ ಅವರನ್ನ ವಜಾಗೊಳಿಸುವಂತೆ ಒತ್ತಾಯಿಸಿತ್ತು. ತಮ್ಮ ಮಗಳ ವಿರುದ್ಧ ಕೇಳಿ ಬಂದಿರುವ ಆರೋಪವನ್ನ ಸಚಿವೆ ಸಂಪೂರ್ಣವಾಗಿ ಅಲ್ಲಗಳೆದು, ಕೋರ್ಟ್ ಮೂಲಕ ಇದಕ್ಕೆ ಉತ್ತರ ನೀಡುವುದಾಗಿ ಘೋಷಣೆ ಮಾಡಿದ್ದರು.

ದೆಹಲಿ ಹೈಕೋರ್ಟ್​ ಸಮನ್ಸ್ ಜಾರಿ ಮಾಡುತ್ತಿದ್ದಂತೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಕಿರಣ್​ ರಿಜಿಜು, ಉನ್ನತ ಸ್ಥಾನ ಹೊಂದಿರುವ ವ್ಯಕ್ತಿಗಳು ಅಥವಾ ಯಾವುದೇ ನಾಗರಿಕರ ವಿರುದ್ಧ ಮಾನನಷ್ಟ ಆರೋಪ ಮಾಡುವ ಮೊದಲು ಸತ್ಯಗಳನ್ನು ಪರಿಶೀಲಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.