ETV Bharat / bharat

ಸಂಸತ್​ ಚಳಿಗಾಲದ ಅಧಿವೇಶನ: ಪ್ರತಿಪಕ್ಷಗಳ ಗದ್ದಲದ ನಡುವೆ 'ಕೃಷಿ ಕಾನೂನುಗಳ ರದ್ದತಿ ಮಸೂದೆ' ಅಂಗೀಕಾರ - Farm Laws Repeal Bill 2021 passed in Lok Sabha

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು 'ಕೃಷಿ ಕಾನೂನುಗಳ ರದ್ದತಿ ಮಸೂದೆ 2021'ಯನ್ನು ಮಂಡಿಸಿದ್ದು, ಇದನ್ನು ಲೋಕಸಭೆ ಅಂಗೀಕರಿಸಿದೆ. ಆದರೆ ಯಾವುದೇ ಚರ್ಚೆ ನಡೆಸದೇ ಮಸೂದೆ ಅಂಗೀಕರಿಸಿದ್ದಕ್ಕೆ ಮತ್ತೆ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ ಕಾರಣ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

Winter session parliament
ಸಂಸತ್​ ಚಳಿಗಾಲದ ಅಧಿವೇಶನ
author img

By

Published : Nov 29, 2021, 11:56 AM IST

Updated : Nov 29, 2021, 12:45 PM IST

ನವದೆಹಲಿ: 2021ರ ಸಂಸತ್​ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಪ್ರತಿಪಕ್ಷಗಳ ಸದಸ್ಯರು ಗದ್ದಲದ ನಡುವೆ ಲೋಕಸಭೆಯಲ್ಲಿ 'ಕೃಷಿ ಕಾನೂನುಗಳ ರದ್ದತಿ ಮಸೂದೆ 2021'ಯನ್ನು ಅಂಗೀಕರಿಸಲಾಗಿದೆ.

  • Winter Session of Parliament | Lok Sabha adjourned till 2pm today

    Speaker Om Birla had requested Opposition MPs to bring the House in order to allow any discussion before the Farm Laws Repeal Bill, 2021 was passed

    — ANI (@ANI) November 29, 2021 " class="align-text-top noRightClick twitterSection" data=" ">

ಕಾಂಗ್ರೆಸ್​ ಪ್ರತಿಭಟನೆ

ಸಂಸತ್​ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಡಿಸೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದೆ. ಪ್ರತಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪ ಮುಂದೂಡಿಕೆಯಾಗುತ್ತಿದ್ದಂತೆಯೇ ಪಾರ್ಲಿಮೆಂಟ್​ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಹುಲ್​ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ ಸೇರಿದಂತೆ ಇತರ ಕೈ ನಾಯಕರು ಕೃಷಿ ಕಾನೂನುಗಳನ್ನು ಕೂಡಲೇ ಹಿಂಪಡೆಯುವಂತೆ ಪ್ರತಿಭಟನೆ ನಡೆಸಿದರು.

congress protest demanding repeal of Centre's three farm laws
ಕಾಂಗ್ರೆಸ್ ನಾಯಕರ ಪ್ರತಿಭಟನೆ

ನವೆಂಬರ್ 19 ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಅಧಿವೇಶನದ ವೇಳೆ ಎಲ್ಲ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಹೇಳಿದ್ದರು.

ಇದನ್ನೂ ಓದಿ: 3 ಕೃಷಿ ಕಾನೂನುಗಳ ರದ್ದು: ಟೀಕೆಗೆ ಗುರಿಯಾದ 'ಉದ್ದೇಶ ಮತ್ತು ಕಾರಣಗಳ ಹೇಳಿಕೆ'

'ಕೃಷಿ ಕಾನೂನುಗಳ ರದ್ದತಿ ಮಸೂದೆ' ಅಂಗೀಕಾರ

ಬೆಳಗ್ಗೆ ಲೋಕಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಘೋಷಣೆ ಕೂಗಿದ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿತ್ತು. 12 ಗಂಟೆಯ ಬಳಿಕ ಲೋಕಸಭಾ ಕಲಾಪ ಆರಂಭವಾಗಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು 'ಕೃಷಿ ಕಾನೂನುಗಳ ರದ್ದತಿ ಮಸೂದೆ 2021'ಯನ್ನು ಮಂಡಿಸಿದ್ದು, ಇದನ್ನು ಲೋಕಸಭೆ ಅಂಗೀಕರಿಸಿದೆ. ಆದರೆ, ಯಾವುದೇ ಚರ್ಚೆ ನಡೆಸದೇ ಮಸೂದೆ ಅಂಗೀಕರಿಸಿದ್ದಕ್ಕೆ ಮತ್ತೆ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ ಕಾರಣ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

Last Updated : Nov 29, 2021, 12:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.