ETV Bharat / bharat

ಹೊಸ ಸಂಸತ್​ ಭವನದಲ್ಲಿ ಡಿಸೆಂಬರ್​ 4 ರಿಂದ ಚಳಿಗಾಲದ ಅಧಿವೇಶನ: ಐಪಿಸಿ, ಸಿಆರ್‌ಪಿಸಿ ಬಿಲ್​ಗಳ ಮಂಡನೆ ಸಾಧ್ಯತೆ - Winter session

ಪಂಚರಾಜ್ಯ ಚುನಾವಣೆಯ ಫಲಿತಾಂಶದ ಮರುದಿನವೇ ಹೊಸ ಸಂಸತ್​ ಭವನದಲ್ಲಿ ಮೊದಲ ಪೂರ್ಣ ಅಧಿವೇಶನ ನಡೆಯಲಿದೆ.

ಚಳಿಗಾಲದ ಅಧಿವೇಶನ
ಚಳಿಗಾಲದ ಅಧಿವೇಶನ
author img

By ETV Bharat Karnataka Team

Published : Nov 9, 2023, 10:48 PM IST

ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಚಳಿಗಾಲದ ಸಂಸತ್​ ಅಧಿವೇಶನ ಡಿಸೆಂಬರ್​ 4 ರಿಂದ ಆರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಅಂದರೆ 19 ದಿನಗಳ ಕಾಲ ನಡೆಯಲಿದೆ. ಇಷ್ಟು ದಿನಗಳಲ್ಲಿ 15 ಕಲಾಪಗಳನ್ನು ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ.

  • Winter Session, 2023 of Parliament will commence from 4th December and continue till 22nd December having 15 sittings spread over 19 days. Amid Amrit Kaal looking forward to discussions on Legislative Business and other items during the session.#WinterSession2023 pic.twitter.com/KiboOyFxk0

    — Pralhad Joshi (@JoshiPralhad) November 9, 2023 " class="align-text-top noRightClick twitterSection" data=" ">

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ (ಟ್ವಿಟರ್​) ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಅವರು, ಅಮೃತ ಕಾಲದ ಅಧಿವೇಶನದಲ್ಲಿ ಸರ್ಕಾರದ ಕಾರ್ಯಗಳು ಮತ್ತು ಇತರ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಯ ಫಲಿತಾಂಶವು ಡಿಸೆಂಬರ್ 3 ರಂದು ಪ್ರಕಟಿಟವಾಗಲಿದೆ. ಇದಾದ ಮರುದಿನವೇ ಹೊಸ ಸಂಸತ್​ ಭವನದಲ್ಲಿ ಮೊದಲ ಪೂರ್ಣ ಅಧಿವೇಶನ ನಡೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್‌ನಲ್ಲಿ ಪ್ರಾರಂಭವಾಗುತ್ತಿತ್ತು. ಆದರೆ, ಪಂಚ ರಾಜ್ಯಗಳ ಚುನಾವಣೆ ಕಾರಣ ಈ ಬಾರಿ ಡಿಸೆಂಬರ್‌ಗೆ ಮುಂದೂಡಲಾಗಿತ್ತು.

ವಿವಿಧ ಬಿಲ್​ಗಳ ಮಂಡನೆ ಸಾಧ್ಯತೆ: ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆ್ಯಕ್ಟ್ ಅನ್ನು ಬದಲಿಸಲು ಬಯಸುವ ಪ್ರಮುಖ ಮೂರು ಮಸೂದೆಗಳನ್ನು ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸುವ ಸಾಧ್ಯತೆಯಿದೆ. ಜೊತೆಗೆ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕದ ಮಸೂದೆ ಸೇರಿದಂತೆ ಹಲವು ಬಿಲ್​ಗಳು ಮಂಡನೆಯಾಗುವ ಸಂಭವವಿದೆ.

ಚುನಾವಣಾ ಆಯುಕ್ತರ ಬಿಲ್​ ಅನ್ನು ಮುಂಗಾರು ಅಧಿವೇಶನದಲ್ಲಿ ಮಂಡನೆ ಮಾಡಲಾಯಿತು. ಪ್ರತಿಪಕ್ಷಗಳು ಮತ್ತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ವಿರೋಧದಿಂದಾಗಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈ ತಿದ್ದುಪಡಿ ಕಾಯ್ದೆಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರಿಗೆ ಕ್ಯಾಬಿನೆಟ್‌ ಸಚಿವ ಸ್ಥಾನಮಾನ ನೀಡಲಿದೆ. ಆದರೆ, ಪ್ರಸ್ತುತ ಅವರ ಸ್ಥಾನಮಾನ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಿಗೆ ಸಮಾನವಾಗಿದೆ. ಹೀಗಾಗಿ ಇದರ ವಿರುದ್ಧ ವಿರೋಧ ವ್ಯಕ್ತವಾಗುತ್ತಿದೆ.

ಸೆಪ್ಟೆಂಬರ್‌ನಲ್ಲಿ ನಡೆದ ವಿಶೇಷ ಸಂಸತ್ ಅಧಿವೇಶನವನ್ನು ಮೊದಲು ಹಳೆಯ ಕಟ್ಟಡದಲ್ಲಿ ನಡೆಸಿ ಬಳಿಕ ಗಣೇಶ ಚತುರ್ಥಿಯಂದಯ ಹೊಸ ಸಂಸತ್​ ಭವನಕ್ಕೆ ವರ್ಗಾಯಿಸಲಾಯಿತು. ಅಲ್ಲಿ ನಡೆದ ಮೊದಲ ದಿನದ ಕಲಾಪದಲ್ಲೇ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ಕಾರ ಮಂಡಿಸಿ ಅಂಗೀಕಾರ ಪಡೆದುಕೊಂಡಿತು. ಇದಕ್ಕೆ ಕಾಂಗ್ರೆಸ್​ ಸೇರಿದಂತೆ ಎಲ್ಲ ಪ್ರತಿಪಕ್ಷಗಳು ಒಪ್ಪಿಗೆ ಸೂಚಿಸಿದ್ದರೆ, ಸಂಸದ ಓವೈಸಿಯ ಪಕ್ಷ ಮಾತ್ರ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮೂವರು ಹೈಕೋರ್ಟ್​ ಜಡ್ಜ್​ಗಳಿಗೆ ಬಡ್ತಿ: 34 ನ್ಯಾಯಮೂರ್ತಿಗಳೊಂದಿಗೆ ಭರ್ತಿಯಾದ ಸುಪ್ರೀಂಕೋರ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.