ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 1,675 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ 31 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,490 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ 2,022 ಹೊಸ ಕೋವಿಡ್ ಕೇಸ್ ಪತ್ತೆ, 46 ಮಂದಿ ಸಾವು
ಸದ್ಯ ದೇಶದಲ್ಲಿ 14,841 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಮವಾರ 1,635 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,00,737 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 192.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.