ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 29,398 ಸೋಂಕಿತರು ಪತ್ತೆಯಾಗಿದ್ದು, 414 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 97,96,770 ಹಾಗೂ ಮೃತರ ಸಂಖ್ಯೆ 1,42,186ಕ್ಕೆ ಏರಿಕೆಯಾಗಿದೆ.
![Total number of corona cases and deaths in India](https://etvbharatimages.akamaized.net/etvbharat/prod-images/9838920_hjh.jpg)
ಕೊರೊನಾಗೆ ಹೆದರದಿರಿ, ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮರೆಯದಿರಿ. ಸರಿಯಾಗಿ ಮಾಸ್ಕ್ ಧರಿಸಿ, ನಿಮ್ಮ ಕೈಗಳನ್ನು ಆಗಾಗ ತೊಳೆಯುತ್ತಿರಿ, ಆರು ಅಡಿ ದೈಹಿಕ ಅಂತರ ಕಾಯ್ದುಕೊಳ್ಳಿ ಎಂದು ಮತ್ತೊಮ್ಮೆ ಆರೋಗ್ಯ ಇಲಾಖೆ ಟ್ವೀಟ್ ಮಾಡಿ ಎಚ್ಚರಿಸಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಪೈಕಿ 92,90,834 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 3,63,749 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.