ETV Bharat / bharat

ರಾಜಸ್ಥಾನ: ಬಾವಿಗೆ ಬಿದ್ದು ಮಹಿಳೆ, ಮೂವರು ಮಕ್ಕಳು ಸಾವು - Rajasthans Udaipur

ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ.

ರಾಜಸ್ಥಾನದ ಉದಯಪುರ
ರಾಜಸ್ಥಾನದ ಉದಯಪುರ
author img

By

Published : Apr 18, 2023, 6:43 PM IST

ಉದಯಪುರ (ರಾಜಸ್ಥಾನ): ಉದಯಪುರದಲ್ಲಿ ಇಂದು (ಮಂಗಳವಾರ) 30 ವರ್ಷದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಬಚ್ಚರ್ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬಚ್ಚರ್ ಗ್ರಾಮದ ನಿವಾಸಿ ನವ್ಲಿ ಬಾಯಿ ಎಂದು ಗುರುತಿಸಲಾಗಿದೆ. ಮೃತ ಮಕ್ಕಳ ವಯಸ್ಸು 8 ರಿಂದ 12 ವರ್ಷ ಎಂದು ತಿಳಿದುಬಂದಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಠಾಣಾಧಿಕಾರಿ ಶ್ಯಾಮ್ ರತ್ನು ಮಾತನಾಡಿ, "ಮಹಿಳೆ ಮತ್ತು ಮೂವರು ಮಕ್ಕಳ ಸಾವಿನ ಬಗ್ಗೆ ನಮಗೆ ಮಾಹಿತಿ ಬಂದಿದೆ. ಶವಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ" ಎಂದರು.

ಟ್ಯೂಷನ್‌ಗೆ ಹೋಗಿದ್ದ ಮಗು ಬಾವಿಯಲ್ಲಿ ಮುಳುಗಿ ಸಾವು: ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ಆರು ವರ್ಷದ ಮಗುವೊಂದು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿತ್ತು. ಮಗು ಟ್ಯೂಷನ್‌ಗೆ ಹೋಗುತ್ತಿತ್ತು. ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಮಯಾಂಕ್ ಸಾಹು ಸಂಜೆ 4 ಗಂಟೆ ಸುಮಾರಿಗೆ ಟ್ಯೂಷನ್‌ಗೆ ತೆರಳಿದ್ದರು. ಆದರೆ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ.

ಆತನನ್ನು ಕಾಣದ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರತಿಯಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಮನೆಯ ಸಮೀಪದ ಬಾವಿಯೊಳಗೆ ಮಗುವಿನ ಶವ ಪತ್ತೆಯಾಗಿದೆ. ನಂತರ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

ಕಳ್ಳಭಟ್ಟಿ ಸೇವಿಸಿ 40ಕ್ಕೂ ಹೆಚ್ಚು ಜನ ಮೃತ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಷಪೂರಿತ ಕಳ್ಳಭಟ್ಟಿ ಸೇವನೆಯಿಂದ ಸಾವಿಗೀಡಾದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರ ಈಗಾಗಲೇ 27 ಜನರು ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡು ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಐವರು ರೋಗಿಗಳು ಸಾವಿಗೀಡಾಗಿದ್ದಾರೆ. ಹಲವು ರೋಗಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಪಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್‌ಪುರದ ವೀರೇಂದ್ರ ಸಾಹ್, ಹರ್ಸಿದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾನೇಜ್ ಮಹತೋ ಮತ್ತು ಬ್ರಿಜೇಶ್ ಯಾದವ್ ಮೃತಪಟ್ಟವರು ಎಂದು ವರದಿಯಾಗಿದೆ.

ಪ್ರಸ್ತುತ 11 ಮಂದಿ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಿಂದ ಆಂಬುಲೆನ್ಸ್ ಮೂಲಕ ಮದ್ಯ ಸೇವನೆಯಿಂದ ಅಸ್ವಸ್ಥರಾಗಿರುವ ರೋಗಿಗಳನ್ನು ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸರು ಒಂಬತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಇದುವರೆಗೆ ಐದು ಪ್ರಕರಣಗಳನ್ನು ದಾಖಲಿಸಿ 174 ಜನರನ್ನು ಬಂಧಿಸಿದ್ದಾರೆ ಎಂದು ಸೋಮವಾರ ತಡರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ವಿಷಪೂರಿತ ಕಳ್ಳಭಟ್ಟಿ ಸೇವಿಸಿ 40ಕ್ಕೂ ಹೆಚ್ಚು ಜನರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.