ETV Bharat / bharat

ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ - ನಿಜಾಮಾಬಾದ್ ಗ್ಯಾಂಗ್​ರೇಪ್​

ನಾಲ್ವರು ಕಾಮುಕರು ಆಸ್ಪತ್ರೆ ಕೊಠಡಿಯಲ್ಲೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

Woman allegedly gang-raped in Telangana hospital

author img

By

Published : Sep 29, 2021, 5:51 PM IST

ನಿಜಾಮಾಬಾದ್​(ತೆಲಂಗಾಣ): ದೇಶದ ವಿವಿಧೆಡೆ ಕಳೆದ ಕೆಲವು ತಿಂಗಳಿಂದ ಸಾಮೂಹಿಕ ಅತ್ಯಾಚಾರದಂತಹ ಅಮಾನೀಯ ಘಟನೆಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ.

ಹೈದರಾಬಾದ್​ನ ನಿಜಾಮಾಬಾದ್​ನ ಖಾಸಗಿ ಆಸ್ಪತ್ರೆಯಲ್ಲೇ ಮಹಿಳೆಯೋರ್ವಳ ಮೇಲೆ ನಾಲ್ವರು ಅಪರಿಚಿತರು ಅತ್ಯಾಚಾರವೆಸಗಿದ್ದಾರೆ. ದುಷ್ಕೃತ್ಯವೆಸಗುವುದಕ್ಕೂ ಮುಂಚಿತವಾಗಿ ಆಕೆಗೆ ಬಲವಂತವಾಗಿ ಮದ್ಯಪಾನ ಮಾಡಿಸಿದ್ದು ತಿಳಿದುಬಂದಿದೆ.

ಇದನ್ನೂ ಓದಿ: ಐಪಿಎಲ್​ ಬೆಟ್ಟಿಂಗ್.. 93 ಲಕ್ಷ ರೂ. ನಗದು, 2.2 ಕೋಟಿ ರೂ. ಮೌಲ್ಯದ ಆಸ್ತಿ ಸೇರಿ 23 ಬುಕ್ಕಿಗಳ ಬಂಧನ..

ಕಳೆದ ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಬಸ್​​ ಸ್ಟ್ಯಾಂಡ್​ ಪಕ್ಕದಲ್ಲಿರುವ ಆಸ್ಪತ್ರೆಯ ಕೊಠಡಿಯಲ್ಲಿ ನಾಲ್ವರು ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಶೋಧ ಆರಂಭಿಸಿದ್ದು, ಸ್ಥಳೀಯ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡುತ್ತಿದ್ದಾರೆ. ಮಹಿಳೆಯನ್ನು ಆಸ್ಪತ್ರೆಯ ಕೊಠಡಿಗೆ ಕಾಮುಕರು ಯಾವ ರೀತಿಯಾಗಿ ಕರೆದುಕೊಂಡು ಹೋಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಟೌನ್​​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.