ಸಂಬಲ್‌ಪುರ (ಒಡಿಶಾ): ಕಳೆದ ಒಂದು ವಾರದಿಂದ ಬೀಗ ಹಾಕಲಾಗಿದ್ದ ಮನೆಯಲ್ಲಿ ವಿಧವೆ ಮತ್ತು ಆಕೆಯ ಇಬ್ಬರು ಪುಟ್ಟ ಮಕ್ಕಳು ಮೃತದೇಹಗಳು ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಾಜಿಯಾ ಪರ್ವೀನ್ (32) ಎಂದು ಗುರುತಿಸಲಾಗಿದ್ದು, ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇಲ್ಲಿನ ಧನುಪಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸುನಪಾಲಿ ಪ್ರದೇಶದಲ್ಲಿ ಸಾಜಿಯಾ ತನ್ನ 9 ವರ್ಷದ ಮಗ ಹಾಗೂ 7 ವರ್ಷದ ಮಗಳೊಂದಿಗೆ ವಾಸವಾಗಿದ್ದರು. ಆದರೆ, ಆರೇಳು ದಿನಗಳಿಂದ ಮನೆ ಬೀಗ ಹಾಕಲಾಗಿತ್ತು. ಶನಿವಾರ ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂತೆಯೇ, ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ಮುರಿದು ಒಳಗಡೆ ಹೋಗಾದ ಮೂವರ ಶವಗಳು ಪತ್ತೆಯಾಗಿವೆ.
ತಾಯಿ ಮತ್ತು ಮಕ್ಕಳ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಇದೊಂದು ನಿಗೂಢ ಘಟನೆಯಾಗಿದ್ದು, ಇಂದು ಮೂವರ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಇದರ ವರದಿ ಬಂದ ನಂತರ ಸಾವಿಗೆ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಮೃತ ಸಾಜಿಯಾ ಪತ್ನಿ ಎರಡು ವರ್ಷಗಳಿಂದ ಮೃತಪಟ್ಟಿದ್ದರು. ಇದರ ನಡುವೆ ವಿಧವೆಯಾಗಿದ್ದ ಆಕೆಯ ಮನೆಗೆ ಯುವಕನೊಬ್ಬ ಹಲವಾರು ಬಾರಿ ಭೇಟಿ ನೀಡುತ್ತಿದ್ದ. ಆದರೆ, ಆತ ಕೂಡ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಕಾಣಿಸುತ್ತಿಲ್ಲ. ಹೀಗಾಗಿ ಈ ಮೂವರ ಸಾವಿನ ಹಿಂದೆ ಯಾರದ್ದೋ ಕೈವಾಡ ಇರುವ ಶಂಕೆ ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಪತ್ನಿ ಶೋಕಿಯಿಂದ ಬೇಸತ್ತ ಪತಿ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ