ಲಖನೌ(ಉತ್ತರ ಪ್ರದೇಶ): ಲಖನೌದ ಗ್ರಾಮಾಂತರ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಗಂಡ ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲಾಗಿದೆ. ಉತ್ತರ ಪ್ರದೇಶ ರಾಜಧಾನಿ ಲಖನೌದ ಗ್ರಾಮಾಂತರ ಪ್ರದೇಶ ರಾಜ್ಗಢ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿರುವ ಪೊಲೀಸರು ಮೃತದೇಹವನ್ನ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ, ಮಾವ, ಸೊಸೆ ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲಾಗಿದೆ.
ಒಂದೂವರೆ ವರ್ಷದ ಹಿಂದೆ ಅಮಿತ್ ಹರ್ದೋಯ್ ಕೊಯಿಲಿಖೇಡ ಗ್ರಾಮದ ನಿವಾಸಿ ಉಷಾಳೊಂದಿಗೆ ಪ್ರೇಮ ವಿವಾಹವಾಗಿದ್ದರು. ಮದುವೆ ಬಳಿಕ ಈ ಜೋಡಿ ಲಖನೌದ ರಾಜ್ಗಢದಲ್ಲಿ ವಾಸವಾಗಿತ್ತು. ಕಳೆದ ಕೆಲ ತಿಂಗಳ ಹಿಂದೆ ಉಷಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಇದಾದ ಬಳಿಕ ಆಕೆಗೆ ಗಂಡನ ಮನೆಯವರು ಮೇಲಿಂದ ಮೇಲೆ ವರದಕ್ಷಿಣೆ ಕಿರುಕುಳ ನೀಡಲು ಶುರು ಮಾಡಿದ್ದಾರೆಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಜೊತೆಗೆ ಆಕೆಯ ಮೇಲೆ ಹಲ್ಲೆ ಸಹ ನಡೆಸಿದ್ದರಂತೆ. ಇದಕ್ಕೆ ಸಂಬಂಧಿಸಿದಂತೆ ಮಹಿಳೆ ಈ ಹಿಂದೆ ದೂರು ನೀಡಿದ್ದಳು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕೋವಿಡ್‌ನಿಂದ ವಿಮಾನ ಸಂಸ್ಥೆಗಳಿಗೆ ₹19 ಸಾವಿರ ಕೋಟಿ, ಏರ್ಪೋರ್ಟ್‌ಗಳಿಗೆ ₹5 ಸಾವಿರ ಕೋಟಿ ನಷ್ಟ
ಆದರೆ, ಇದೀಗ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಮಹಿಳೆಯ ತಂದೆ ನೀಡಿರುವ ದೂರಿನ ಮೇರೆಗೆ ಆಕೆಯ ಗಂಡ ಸೇರಿದಂತೆ ಐವರ ವಿರುದ್ಧ ವರದಕ್ಷಿಣೆ ಕಿರುಕುಳ ದಾಖಲಾಗಿದೆ.