ಡುಮ್ಕಾ( ಜಾರ್ಖಂಡ್) : ಜಾರ್ಖಂಡ್‌ನ ಡುಮ್ಕಾ ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಹ ಹೀನ ಕೃತ್ಯ ನಡೆದಿದೆ. ಗಂಡನ ಎದುರೇ ಮಹಿಳೆ ಮೇಲೆ 17 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಟ್ಟ ಪ್ರದೇಶದಲ್ಲಿ ಈ ಅಪರಾಧ ನಡೆದಿದೆ. ಮಹಿಳೆ ತನ್ನ ಪತಿಯೊಂದಿಗೆ ಜಾತ್ರೆಯಿಂದ ಮನೆಗೆ ಮರಳುತ್ತಿದ್ದಾಗ ಮಂಗಳವಾರ ಕಾಮುಕರು ಈ ದುಷ್ಕೃತ್ಯವೆಸಗಿದ್ದಾರೆ. ಆರೋಪಿಗಳು ಈ ದಂಪತಿ ಸಂಚರಿಸುತ್ತಿದ್ದ ದಾರಿ ತಪ್ಪಿಸಿ, ನಂತರ ಮಹಿಳೆಯ ಗಂಡನ ಮುಂದೆಯೇ ತಮ್ಮ ವಿಕೃತಿ ಮೆರೆದಿದ್ದಾರೆ.
ಘಟನೆ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಪೊಲೀಸ್ ಠಾಣೆಗೆ ಧಾವಿಸಿ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಐದು ಮಕ್ಕಳ ತಾಯಿಯಾಗಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.