ನವದೆಹಲಿ/ಗಾಜಿಯಾಬಾದ್ : ಇಲ್ಲಿನ ಉತ್ತರಾಂಚಲ ಕಾಲೋನಿಯಲ್ಲಿ ವಾಸವಾಗಿದ್ದ ಮಹಿಳೆಯೋರ್ವಳು ತನ್ನಿಬ್ಬರು ಮಕ್ಕಳನ್ನ ಕೊಲೆಗೈದು ತದ ನಂತರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ರವಿವಾರ ಸಂಜೆ ಈ ಪ್ರಕರಣ ನಡೆದಿರುವುದಾಗಿ ತಿಳಿದು ಬಂದಿದೆ. ಮಹಿಳೆಯೋರ್ವಳು ತನ್ನ 40 ದಿನದ ನವಜಾತ ಶಿಶು ಹಾಗೂ ಐದು ವರ್ಷದ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದು, ಇದಾದ ಬಳಿಕ ತಾನು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಪ್ರಿಯಾ ಎಂಬ ಮಹಿಳೆ ತನ್ನಿಬ್ಬರು ಮಕ್ಕಳನ್ನ ಕೊಲೆ ಮಾಡಿ, ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯಾವ ಕಾರಣಕ್ಕಾಗಿ ಆಕೆ ಈ ಕೃತ್ಯವೆಸಗಿದ್ದಾಳೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈಗಾಗಲೇ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ ಎಂದಿದ್ದಾರೆ.
ಇದನ್ನೂ ಓದಿರಿ: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಇಂದು ಬೆಳಗ್ಗೆಯಿಂದಲೂ ಮಹಿಳೆ ವಾಸವಾಗಿದ್ದ ಮನೆಯಲ್ಲಿ ಯಾವುದೇ ರೀತಿಯ ಚಲನವಲನ ಕಾಣಿಸಿಕೊಳ್ಳದ ಕಾರಣ ಪಕ್ಕದ ಮನೆಯವರಿಗೆ ಸಂದೇಹ ಬಂದಿದ್ದು, ಅಲ್ಲಿಗೆ ಹೋಗಿ ನೋಡಿದಾಗ ಸಾವನ್ನಪ್ಪಿರುವುದು ಗೊತ್ತಾಗಿದೆ.
ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು, ಪತ್ನಿ ಹಾಗೂ ತನ್ನಿಬ್ಬರು ಮಕ್ಕಳು ಸಾವನ್ನಪ್ಪಿರುವ ಮಾಹಿತಿ ಗೊತ್ತಿದ್ದರೂ, ಗಂಡ ಪೊಲೀಸರಿಗೆ ದೂರು ನೀಡಿರಲಿಲ್ಲ ಎಂಬುದು ತಿಳಿದು ಬಂದಿದೆ.