ಹೈದರಾಬಾದ್(ತೆಲಂಗಾಣ): ಹೊಸ ವರ್ಷ ಬರಮಾಡಿಕೊಳ್ಳುವ ತವಕದಲ್ಲಿ ಕಂಠಪೂರ್ತಿ ಮದ್ಯ ಸೇವನೆ ಮಾಡಿರುವ ಯುವತಿಯೋರ್ವಳು ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಪ್ರಕರಣದ ಸಂಪೂರ್ಣ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಹೈದರಾಬಾದ್ನ ಜುಬಿಲಿ ಹಿಲ್ಸ್ ಚೆಕ್ ಪೋಸ್ಟ್ ಬಳಿ ಡಿ.31ರ ತಡರಾತ್ರಿ ಈ ಘಟನೆ ನಡೆದಿದೆ. ಹೊಸ ವರ್ಷ ಆಚರಣೆ ಸಂಭ್ರಮದಲ್ಲಿದ್ದ ಯುವತಿ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದು, ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸಲು ಮುಂದಾದಾಗ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾಳೆ.
ಇದನ್ನೂ ಓದಿರಿ: ಸೇನಾ ಹೆಲಿಕಾಪ್ಟರ್ ಪತನ ಪ್ರಕರಣ: ಮುಂದಿನ ವಾರ ತನಿಖಾ ವರದಿ ಸಲ್ಲಿಕೆ ಸಾಧ್ಯತೆ
ಬಂಜಾರ್ ಹಿಲ್ಸ್ ಪೊಲೀಸರು ತಡರಾತ್ರಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸ್ನೇಹಿತರೊಂದಿಗೆ ಯುವತಿ ಕೂಡ ಕಾರಿನಲ್ಲಿ ಬಂದಿದ್ದಾಳೆ. ಪರೀಕ್ಷೆಗೊಳಪಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಇದಕ್ಕೆ ಹಿಂದೇಟು ಹಾಕಿರುವ ಆಕೆ ಅಸಭ್ಯವಾಗಿ ವರ್ತಿಸಿ, ಖಾಕಿ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಇತರೆ ಸ್ನೇಹಿತರು ಯುವತಿಗೆ ಬೆಂಬಲ ನೀಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.