ನವಾಡ (ಬಿಹಾರ): ಮಹಿಳೆಯೊಬ್ಬರು ಬೆಂಕಿಯಿಂದ ಪ್ರಾಣ ಉಳಿಸಿಕೊಳ್ಳಲು ಹೋಗಿ ನಾಲ್ಕು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ರಾತ್ರಿ ಬಿಹಾರದ ನವಾಡ ಎಂಬಲ್ಲಿ ನಡೆದಿದೆ. ನವಾಡದ ಕದಿರ್ಗಂಜ್ ಮಾರುಕಟ್ಟೆ ಬಳಿ ಇರುವ ನಾಲ್ಕು ಅಂತಸ್ತಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಎರಡು ಅಗ್ನಿ ಶಾಮಕ ದಳ ವಾಹನಗಳಿಂದ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಲು ಹರಸಹಾಸ ಪಟ್ಟಿವೆ.
ಮೂಲಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ನಿಖರವಾಗಿ ಅಗ್ನಿ ಅವಘಡಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಮನೆಯಲ್ಲಿ ಏಳು ಮಂದಿ ಇದ್ದರು, ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಮನೆಯಿಂದ ಆಚೆ ಬಂದಿದ್ದಾರೆ. ಆದರೆ, ಮಗುವಿನ ಜೊತೆ ಮಹಿಳೆಯೊಬ್ಬರೇ ಬೆಂಕಿಯಲ್ಲಿ ಸಿಲುಕಿಕೊಂಡಿದ್ದರು, ಮೊದಲು ಮಗುವನ್ನು ಬೆಂಕಿಯ ಕೆನ್ನಾಲಿಗೆಯಿಂದ ರಕ್ಷಿಸಲು ಮಹಿಳೆಯು ಮಗುವನ್ನು ಬಟ್ಟೆಗಳಿಂದ ಸುತ್ತಿ ಕಿಡಕಿಯಿಂದ ಹೊರಗೆ ಎಸೆದಿದ್ದಾರೆ.
ನಂತರ, ಮಹಿಳೆಯು ಬೆಂಕಿಯಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಕಟ್ಟಡದ ಮೂರನೇ ಮಹಡಿಯ ಕಿಟಕಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಸ್ಥಳೀಯರು, ‘‘ಸುರೇಂದ್ರ ಕೇಸರಿ ಅವರ ಮನೆಗೆ ಇದ್ದಕ್ಕಿಂದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿರುವ ಗೃಹೋಪಯೋಗಿ ವಸ್ತುಗಳು, ಬಟ್ಟೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದರ ಜೊತೆಗೆ ಕಟ್ಟಡಕ್ಕೆ ಅಂಟಿಕೊಂಡಿದ್ದ ಜವಳಿ ಅಂಗಡಿಗೂ ಸಹ ಬೆಂಕಿ ಹೊತ್ತಿಕೊಂಡಿದ್ದು ಸುಮಾರು 50 ಲಕ್ಷ ರೂ, ನಷ್ಟವಾಗಿದೆ’’ ಎಂದು ತಿಳಿಸಿದರು.
ಸಮಾರಂಭದಲ್ಲಿ ಸೀರೆಗೆ ಹೊತ್ತಿಕೊಂಡ ಬೆಂಕಿ: ಕಾರ್ಯಕ್ರಮ ಉದ್ಘಾಟನೆಗೆ ಎಂದು ಬಂದಿದ್ದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆಯ ಹಿಂಜಾವಾಡಿಯಲ್ಲಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎನ್ಸಿಪಿ ಸಂಸದೆ ಸುಪ್ರಿಯಾ ಅವರು ಕಾರ್ಯಕ್ರಮ ಉದ್ಘಾಟನೆ ಸಂದರ್ಭದಲ್ಲಿ ಹಚ್ಚಿದ್ದ ದೀಪ ಸೀರೆಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ತಕ್ಷಣವೇ ಬೆಂಕಿಯನ್ನು ನಂದಿಸಲಾಗಿದೆ.
ನಿಗೂಢವಾಗಿ ಹೊತ್ತಿಕೊಂಡ ಬೆಂಕಿ, ಸುಟ್ಟು ಕರಕಲಾದ ಬಸ್: ರಸ್ತೆ ಬದಿ ನಿಂತಿದ್ದ ಬಸ್ಗೆ ನಿಗೂಢವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಜಮ್ಮು ಕಾಶ್ಮೀರದ ರಸ್ತೆ ನಿಗಮಕ್ಕೆ (ಜೆಕೆಆರ್ಟಿಸಿ) ಸೇರಿದ ಬಸ್, ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಶಿಂಗಾಲಿಪೋರಾ ಖಾಗ್ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದೆ ಇದರ ಬಗ್ಗೆ ಹೆಚ್ಚು ಅನುಮಾನಗಳಿದ್ದು, ಬೆಂಕಿಗೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತೀಳಿಸಿದ್ದಾರೆ.
ಇದನ್ನೂ ಓದಿ: ವಿಮಾನದ ತುರ್ತು ಬಾಗಿಲು ತೆರೆದ ಪಕ್ಷವೊಂದಕ್ಕೆ ಸೇರಿದ ಪ್ರಯಾಣಿಕ.. ತಮಿಳುನಾಡು ಸಚಿವರ ಆರೋಪ