ಕೋಲ್ಕತ್ತಾ: ಕಳೆದ ಕೆಲ ದಿನಗಳ ಹಿಂದೆ ಕೆಲವು ಪತ್ರಿಕೆಗಳ ಮೊದಲ ಪುಟದಲ್ಲಿ ಜಾಹೀರಾತುವೊಂದು ಕಾಣಿಸಿಕೊಂಡಿತ್ತು. ಅದರಲ್ಲಿ ಮಹಿಳೆ ನಗುವ ಮುಖದಿಂದ ತಮಗೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಮನೆ ಸಿಕ್ಕಿದೆ ಎಂದು ಹೇಳಿಕೊಂಡಿದ್ದರು. ಆದರೆ ಆ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಾಹಿತಿ ಬಹಿರಂಗಗೊಂಡಿದೆ.
ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಲಕ್ಷ್ಮಿ ದೇವಿ ಎಂಬ ಮಹಿಳೆಗೆ ಇದರ ಯಾವುದೇ ಮಾಹಿತಿ ಗೊತ್ತಿಲ್ಲ. ಸದ್ಯ ತಾನು ಕೋಲ್ಕತ್ತಾದ ಮುನ್ಸಿಪಾಲ್ ಕಾರ್ಪೋರೇಶನ್ ಅಡಿ 71ರ ವಾರ್ಡ್ನ ಮಂಗಲಾನಾ ಲೇನ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಇದರ ಬಗ್ಗೆ ಅವರ ಬಳಿ ಪ್ರಶ್ನೆ ಕೇಳಿದಾಗ, ನನಗೆ ಇದರ ಬಗ್ಗೆ ಯಾವುದೇ ಜ್ಞಾನವಿಲ್ಲ. ಈ ಯೋಜನೆಯಡಿ ನನಗೆ ಮನೆ ಸಿಕ್ಕಿಲ್ಲ. ಸದ್ಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ ಎಂದಿದ್ದಾರೆ.
ನನ್ನ ಫೋಟೋ ತೆಗೆದವರು ಯಾರು ಮತ್ತು ಯಾವಾಗ ಎಂಬುದು ನನಗೆ ಗೊತ್ತಿಲ್ಲ. ಈ ವಿಚಾರವಾಗಿ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಹೇಳಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ 294 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, 8 ಹಂತಗಳಲ್ಲಿ ವೋಟಿಂಗ್ ನಡೆಯಲಿದೆ. ವಿಶೇಷವಾಗಿ ಟಿಎಂಸಿ-ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.
ಇದನ್ನೂ ಓದಿ.. ಹುಬ್ಬಳ್ಳಿಯಲ್ಲಿ ಹಿಂದಿನ ಕಾಲುಗಳ ಸ್ವಾಧೀನ ಕಳೆದುಕೊಂಡ ಬೀದಿನಾಯಿ... ಈ ಯುವಕ ಮಾಡಿದ್ದೇನು ನೀವೇ ನೋಡಿ!