ನವದೆಹಲಿ: ಇಲ್ಲಿನ ಶಕುರ್ ಬಸ್ತಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕುಳಿತಿದ್ದ 22 ವರ್ಷದ ಯುವತಿಯನ್ನು ಎಳೆದೊಯ್ದು ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ.
ರೈಲು ನಿಲ್ದಾಣದ ಬಳಿ ವಾಸಿಸುವ ಸಂತ್ರಸ್ತೆಯು, ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಜಗಳವಾದ ಕಾರಣ ಮುನಿಸಿಕೊಂಡು ಬಂದು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕುಳಿತಿದ್ದಳು. ಈ ವೇಳೆ ಮೂವರು ಕಾಮುಕರು ಯುವತಿಯನ್ನು ಎಳೆದೊಯ್ದು ಆಕೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಬಳಿಕ ಈ ವಿಚಾರವನ್ನು ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟ ಯುವಕರು.. ಕೇಸ್ ದಾಖಲು
ಬಳಿಕ ಮನೆಗೆ ಮರಳಿದ ಅಂತ್ರಸ್ತೆ ಘಟನೆಯ ಬಗ್ಗೆ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾಳೆ. ನಂತರ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ. ಈ ಕುರಿತು ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.