ETV Bharat / bharat

ದೇಶದಲ್ಲಿ ನಿಲ್ಲದ ಕಾಮುಕರ ಕ್ರೌರ್ಯ: ಮುಂಬೈನಲ್ಲಿ ಅತ್ಯಾಚಾರವೆಸಗಿ ಖಾಸಗಿ ಭಾಗಕ್ಕೆ ರಾಡ್‌ ಹಾಕಿ ವಿಕೃತಿ! - ಖಾಸಗಿ ಭಾಗದಲ್ಲಿ ರಾಡ್​

ವಾಣಿಜ್ಯನಗರಿ ಮುಂಬೈನಲ್ಲಿ ಅಮಾನವೀಯ ಘಟನೆ ನಡೆದಿದೆ. 32 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಭಾಗಕ್ಕೆ ರಾಡ್​ ಹಾಕಿದ ಕಾಮುಕ ವಿಕೃತಿ ಮೆರೆದಿದ್ದಾನೆ.

Women rape
Women rape
author img

By

Published : Sep 10, 2021, 5:22 PM IST

ಮುಂಬೈ(ಮಹಾರಾಷ್ಟ್ರ): ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಕಾಮುಕನೋರ್ವ ಆಕೆಯ ಗುಪ್ತಾಂಗಕ್ಕೆ ರಾಡ್​ ಹಾಕಿ ಅಮಾನವೀಯತೆ ಮೆರೆದಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಸದ್ಯ ಸಂತ್ರಸ್ತೆಯ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 32 ವರ್ಷದ ಮಹಿಳೆ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ. ಅತ್ಯಾಚಾರ ಎಸಗಿದ ಕಾಮುಕ ಆಕೆಯ ಖಾಸಗಿ ಭಾಗದಲ್ಲಿ ರಾಡ್​​ ತುರುಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ತುಮಕೂರು : 12 ವರ್ಷದ ಬಾಲಕಿ ಮೇಲೆ 65 ವರ್ಷದ ಮುದುಕನಿಂದ ಅತ್ಯಾಚಾರ

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್​ ಆಯುಕ್ತರು, ಸ್ಥಳ ಪರಿಶೀಲನೆ ನಡೆಸಿ, ಹೆಚ್ಚಿನ ತನಿಖೆಗೆ ಆದೇಶಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪೊಲೀಸರು ತಡರಾತ್ರಿ 3.30ರ ವೇಳೆ ತಮಗೆ ಫೋನ್ ಕಾಲ್​ ಬಂದಿದ್ದು, ಘಟನಾ ಸ್ಥಳಕ್ಕೆ ತೆರಳಿದಾಗ ಸಂತ್ರಸ್ತೆ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದು ಕಂಡುಬಂತು. ತಕ್ಷಣವೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.