ಕಡಲೂರು(ತಮಿಳುನಾಡು): ಗಂಡನ ಮನೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಎಂಬ ಕಾರಣಕ್ಕೆ ಮನನೊಂದು ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಖಾಸಗಿ ಆಸ್ಪತ್ರೆವೊಂದರಲ್ಲಿ ಕೆಲಸ ಮಾಡ್ತಿದ್ದ ರಮ್ಯಾ(27) ಕಾರ್ತಿಕೇಯನ್ ಎಂಬಾತನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು. ಇವರಿಬ್ಬರ ಮದುವೆ ಏಪ್ರಿಲ್ 6ರಂದು ನಡೆದಿತ್ತು. ಕಾರ್ತಿಕೇಯನ್ ಮನೆಯಲ್ಲಿ ಶೌಚಾಲಯ ಇರಲಿಲ್ಲ. ಹೀಗಾಗಿ, ಏಪ್ರಿಲ್ 7ರಂದು ರಮ್ಯಾ ಮರಳಿ ತವರು ಮನೆಗೆ ಹೋಗಿದ್ದರು. ಇಷ್ಟಾದರೂ ಕಾರ್ತಿಕೇಯನ್ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿಲ್ಲ. ಇದೇ ವಿಚಾರವಾಗಿ ಗಂಡ - ಹೆಂಡತಿ ನಡುವೆ ತೀವ್ರ ವಾಗ್ವಾದ ನಡೆದಿದ್ದು, ರಮ್ಯಾಳನ್ನ ಕೆಟ್ಟದಾಗಿ ನಿಂದಿಸಿದ್ದಾನೆ.
ಇದನ್ನೂ ಓದಿ: ಕೇದಾರನಾಥಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ.. ಇದರ ಹಿಂದೆ ಮೋದಿ ಕೈವಾಡ!
ಇದರಿಂದ ಖಿನ್ನತೆಗೊಳಗಾಗಿರುವ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ತಕ್ಷಣವೇ ರಮ್ಯಾಳ ತಾಯಿ ಮಂಜುಳಾ ಹಾಗೂ ನೆರೆಹೊರೆಯವರು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಹೆಚ್ಚಿನ ಚಿಕಿತ್ಸೆಗೋಸ್ಕರ ಪುದುಚೇರಿ ಜಿಪ್ಮರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದುರದೃಷ್ಟವಶಾತ್ ರಮ್ಯಾ ಸಾವನ್ನಪ್ಪಿದ್ದಾಳೆ.
ಘಟನೆ ಬೆನ್ನಲ್ಲೇ ರಮ್ಯಾ ತಾಯಿ ಮಂಜುಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.