ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿಗೆ ಇದೀಗ ಗುಡ್ನ್ಯೂಸ್ ನೀಡಲಾಗಿದ್ದು, ಇನ್ಮುಂದೆ ಅವರು ಎಂಟು ಗಂಟೆಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕ ಸಂಜಯ್ ಪಾಂಡೆ ಸಂಬಂಧಪಟ್ಟ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಕುಟುಂಬದಲ್ಲಿ ಮತ್ತು ಕಚೇರಿಯಲ್ಲಿ ಕೆಲಸ ಮಾಡುವ ಅವರ ಮೇಲಿನ ಹೊರೆ, ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. ಇಷ್ಟು ದಿನ ಮಹಾರಾಷ್ಟ್ರದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ದಿನದ 12 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರಿಂದ ಅವರು ಮಾನಸಿಕ ತೊಂದರೆ ಅನುಭವಿಸುತ್ತಿದ್ದು, ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು.
ಕುಟುಂಬ ಹಾಗೂ ಕರ್ತವ್ಯದ ನಡುವೆ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ 12 ಗಂಟೆಗಳ ಬದಲು ದಿನದ 8 ಗಂಟೆಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸಲಿದ್ದಾರೆ.
ಇದನ್ನೂ ಓದಿರಿ: ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ.. ಮೈಸೂರಿನಲ್ಲಿ ಮುಖ್ಯ ಶಿಕ್ಷಕ ಸೇವೆಯಿಂದ ವಜಾ
ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯದ ಮಹಿಳಾ ಅಧಿಕಾರಿಗಳು ಎಂಟು ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದರು. ಇವರ ಮನವಿ ಪರಿಗಣಿಸಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಈಗಾಗಲೇ ಪ್ರಾಯೋಗಿಕವಾಗಿ ಈ ಹೊಸ ನಿಮಯ ಜಾರಿಗೊಳಿಸಲಾಗಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ