ಶ್ರೀಕಾಳಹಸ್ತಿ(ಆಂಧ್ರಪ್ರದೇಶ): ಮಹಿಳಾ ಸ್ವಯಂ ಸೇವಕಿಯಾಗಿ ಕೆಲಸ ಮಾಡ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಳಹಸ್ತಿಯಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಅನುಚಿತ ವರ್ತನೆಯಿಂದಾಗಿ ಈ ನಿರ್ಧಾರ ಕೈಗೊಂಡಿದ್ದಾಳೆಂಬ ಆರೋಪ ಕೇಳಿ ಬಂದಿದೆ.
ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿಯಲ್ಲಿ ಸ್ವಯಂಸೇವಕಿಯಾಗಿದ್ದ ಉಮಾಮಹೇಶ್ವರಿ(23) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಪೊಲೀಸ್ ಕಾನ್ಸ್ಟೇಬಲ್ ಅನುಚಿತ ವರ್ತನೆಯಿಂದಾಗಿ ತಮ್ಮ ಮಗಳು ಈ ನಿರ್ಧಾರ ಕೈಗೊಂಡಿದ್ದಾಳೆಂದು ಕುಟುಂಬಸ್ಥರು ದೂರು ನೀಡಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಉಮಾಮಹೇಶ್ವರಿ ಸಾವಿಗೆ ಕಾರಣವಾಗಿರುವ ಕಾನ್ಸ್ಟೇಬಲ್ನನ್ನ ಈ ಕೂಡಲೇ ವಜಾಗೊಳಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿರಿ: ಕಾಮುಕ ಕಾನ್ಸ್ಟೇಬಲ್: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ!
ತೆಲಂಗಾಣದಲ್ಲಿ ಅಪ್ರಾಪ್ತೆ ಆತ್ಮಹತ್ಯೆ
ತೆಲಂಗಾಣದಲ್ಲೂ ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಯುವಕನೊಂದಿಗೆ ಪ್ರೀತಿಯ ಬಲೆಗೆ ಬಿದ್ದಿದ್ದ ಅಪ್ರಾಪ್ತೆಯನ್ನ ಲೈಂಗಿಕವಾಗಿ ಬಳಸಿಕೊಂಡಿರುವ ವ್ಯಕ್ತಿ, ತದನಂತರ ಮದುವೆ ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾನೆ. ಇದರಿಂದ ಮನನೊಂದಿರುವ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದು ಬಂದಿದೆ.