ನವದೆಹಲಿ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಲಖೀಂಪುರ್ ಖೇರಿ ಹಿಂಸಾಚಾರ ಘಟನೆ ಬಳಿಕ ಈ ಪ್ರದೇಶಕ್ಕೆ ಭೇಟಿ ನೀಡಿಲು ಪ್ರತಿಪಕ್ಷಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಆದರೆ, ಅಲ್ಲಿನ ಸರ್ಕಾರ ಮಾತ್ರ ಇದಕ್ಕೆ ಅವಕಾಶ ನೀಡುತ್ತಿಲ್ಲ. ಘಟನೆ ಖಂಡಿಸಿ ವಿವಿಧ ರಾಜಕೀಯ ವಿರೋಧಿಗಳು ಯುಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಳನ್ನು ಮಾಡುತ್ತಿವೆ.
ಈ ನಡುವೆ ಸರ್ಕಾರಗಳ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನಾ ನಾಯಕ ಸಂಜಯ್ ರಾವತ್, ಪ್ರತಿಭಟನಾ ನಿರತರ ಮೇಲೆ ಹಲ್ಲೆ ಮಾಡಿದ ವ್ಯಕ್ತಿ ರಾಜಾರೋಷವಾಗಿ ಹೊರಗಡೆ ಓಡಾಡುತ್ತಿದ್ದಾನೆ. ಆದರೆ, ಶಾಂತಿ ಕದಡುವ ಕಾರಣ ಕೊಟ್ಟು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಭೇಟಿ ಬಳಿಕ ಮಾತನಾಡಿರುವ ರಾವತ್, ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗುವುದರಿಂದ ಶಾಂತಿ ಕದಡುತ್ತದೆಯೇ ಎಂದು ಎಂದು ಪ್ರಶ್ನಿಸಿದ್ದಾರೆ. ಅಲ್ಲಿದೆ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಹಾಗೂ ಒಗ್ಗಟ್ಟನ್ನು ವ್ಯಕ್ತಪಡಿಸುವುದು ಶಾಂತಿಗೆ ಭಂಗ ತರುತ್ತದೆ ಎಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಯನ್ನು ವಿರೋಧಿಸಲು ವಿರೋಧ ಪಕ್ಷಗಳು ಒಗ್ಗೂಡುತ್ತವೆಯೇ ಎಂಬ ಪ್ರಶ್ನೆಗೆ ರಾವತ್, ಮುಂದಿನ ಕಾರ್ಯತಂತ್ರವನ್ನು ಬಹಿರಂಗಪಡಿಸದಿದ್ದರೂ, ಇದು ಪ್ರಗತಿಯಲ್ಲಿದೆ ಎಂದಿದ್ದಾರೆ.