ETV Bharat / bharat

ವಿಶ್ವದಲ್ಲಿ ಕೊರೊನಾರ್ಭಟ: ಒಂದು ಮಿಲಿಯನ್​​ ಕೇಸ್ ವರದಿಯಾದ 9 ದೇಶಗಳಿವು... ​

ಅಮೆರಿಕ, ಭಾರತ, ಬ್ರೆಜಿಲ್, ರಷ್ಯಾ, ಫ್ರಾನ್ಸ್, ಸ್ಪೇನ್, ಅರ್ಜೆಂಟೀನಾ, ಕೊಲಂಬಿಯಾ ಮತ್ತು ಇಂಗ್ಲೆಂಡ್ ಒಂದು ಮಿಲಿಯನ್​ಗಿಂತಲೂ ಹೆಚ್ಚು ಕೊರೊನಾ ಪ್ರಕರಣಗಳನ್ನು ವರದಿ ಮಾಡಿದ ರಾಷ್ಟ್ರಗಳಾಗಿವೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​
author img

By

Published : Nov 5, 2020, 5:20 PM IST

ಹೈದರಾಬಾದ್​: ಯುರೋಪ್​​ನಲ್ಲಿ ಹಿಂದಿನ ವಾರಗಳಿಗೆ ಹೋಲಿಸಿದರೆ ಕೋವಿಡ್​ ಮೃತರ ಸಂಖ್ಯೆಯಲ್ಲಿ ಶೇ.46 ರಷ್ಟು ಹೆಚ್ಚಳ ಕಂಡುಬಂದಿದೆ. ಕೋವಿಡ್​ ಆರಂಭವಾದಾಗಿನಿಂದ ಇಲ್ಲಿಯವರೆಗೂ 9 ದೇಶಗಳಲ್ಲಿ (ಅಮೆರಿಕ, ಭಾರತ, ಬ್ರೆಜಿಲ್, ರಷ್ಯಾ, ಫ್ರಾನ್ಸ್, ಸ್ಪೇನ್, ಅರ್ಜೆಂಟೀನಾ, ಕೊಲಂಬಿಯಾ ಮತ್ತು ಇಂಗ್ಲೆಂಡ್​) ಒಂದು ಮಿಲಿಯನ್​ಗಿಂತಲೂ ಹೆಚ್ಚು ಕೇಸ್​ಗಳು ವರದಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್​ ಮಾಡಿದೆ.

Global COVID-19 tracker
ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್​

ಪ್ರಪಂಚದಲ್ಲಿ ಬರೋಬ್ಬರಿ 4,84,22,013 ಜನರು ಕೊರೊನಾ ಸುಳಿಯಲ್ಲಿ ಸಿಲುಕಿದ್ದು, 12,30,786 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ 3,46,71,485 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಒಂದು ಕೋಟಿ ( 98,01,355) ಗಡಿ ತಲುಪುತ್ತಿದ್ದು, ಮೃತರ ಸಂಖ್ಯೆ 2,39,829ಕ್ಕೆ ಏರಿಕೆಯಾಗಿದೆ.

Global COVID-19 tracker
ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್​

ಕೇಸ್​ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 83,63,412 ಕೇಸ್​ಗಳು ಪತ್ತೆಯಾಗಿದ್ದು, 1,24,354 ಜನರು ವೈರಸ್​ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 55,90,941 ಪ್ರಕರಣಗಳು ಹಾಗೂ 1,61,170 ಸಾವುಗಳು ವರದಿಯಾಗಿದೆ.

4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 16,93,454 ಕೇಸ್​​ಗಳಿದ್ದು, 29,217 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 86,115 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.