ಹೈದರಾಬಾದ್: ವಿಶ್ವದಾದ್ಯಂತ ಬರೋಬ್ಬರಿ 7,26,54,602 ಜನರಿಗೆ ಕಿಲ್ಲರ್ ಕೊರೊನಾ ವೈರಸ್ ಅಂಟಿದ್ದು, 16,19,028 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ, ಸೋಂಕಿತರ ಪೈಕಿ 5,08,71,457 ಮಂದಿ ಮಹಾಮಾರಿಯಿಂದ ಚೇತರಿಸಿಕೊಂಡಿದ್ದಾರೆ.
ಅನೇಕ ತಿಂಗಳಿನಿಂದ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಮುಂದುವರೆದಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 1,67,37,267 ಇದ್ದು, ಮೃತರ ಸಂಖ್ಯೆ 3 ಲಕ್ಷ (3,06,459) ಗಡಿ ದಾಟಿದೆ.
ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 98,84,716 ಕೇಸ್ಗಳು ಪತ್ತೆಯಾಗಿದ್ದು, 1,43,393 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 69,01,990 ಪ್ರಕರಣಗಳು ಹಾಗೂ 1,81,419 ಸಾವುಗಳು ವರದಿಯಾಗಿದೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 26,53,928 ಕೇಸ್ಗಳಿದ್ದು, 46,941 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ನಿನ್ನೆ 27 ಸಾವಿರ ಕೋವಿಡ್ ಕೇಸ್ ಪತ್ತೆ.. ಎಲ್ಲೆಂದರಲ್ಲಿ ಉಗುಳುವುದನ್ನು ಬಿಡಿ ಎಂದ ಆರೋಗ್ಯ ಇಲಾಖೆ
ಅಮೆರಿಕ, ಬ್ರೆಜಿಲ್, ಭಾರತದ ಬಳಿಕ ಸಾವಿನ ಸಂಖ್ಯೆಯಲ್ಲಿ ಮೆಕ್ಸಿಕೋ, ಇಂಗ್ಲೆಂಡ್ ಹಾಗೂ ಇಟಲಿ ಕ್ರಮವಾಗಿ 4,5 ಹಾಗೂ 6ನೇ ಸ್ಥಾನದಲ್ಲಿವೆ. ಒಟ್ಟು 218 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 86,741 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.