ಹೈದರಾಬಾದ್: ವಿಶ್ವದಾದ್ಯಂತ ಬರೋಬ್ಬರಿ 7,71,72,373 ಜನರಿಗೆ ಕಿಲ್ಲರ್ ಕೊರೊನಾ ವೈರಸ್ ಅಂಟಿದ್ದು, ಇವರಲ್ಲಿ 5,40,89,680 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆ 17 ಲಕ್ಷ ಗಡಿಯತ್ತ (16,99,644) ಸಾಗಿದೆ.
ಕೋವಿಡ್ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 1,82,67,579 ಇದ್ದು, ಮೃತರ ಸಂಖ್ಯೆ 3,24,869ಕ್ಕೆ ಏರಿಕೆಯಾಗಿದೆ. ಕೊರೊನಾ ಲಸಿಕೆಯನ್ನು ಮೊದಲು ತಾವೇ ಹಾಕಿಸಿಕೊಳ್ಳುವುದಾಗಿ ಚುನಾಯಿತ ಅಧ್ಯಕ್ಷ ಜೋ ಬೈಡನ್ ಜನರಿಗೆ ಅಮೆರಿಕ ಜನರಿಗೆ ಧೈರ್ಯ ನೀಡಿದ್ದಾರೆ.
ಇದನ್ನೂ ಓದಿ: ಅಮೆರಿಕನ್ನರಿಗೆ ಕೊರೊನಾ ಲಸಿಕೆ ಕಡ್ಡಾಯವೆಂದು ಒತ್ತಾಯಿಸುವುದಿಲ್ಲ : ಜೋ ಬೈಡನ್
ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಒಂದು ಕೋಟಿಗೂ ಹೆಚ್ಚು (1,00,56,248) ಕೇಸ್ಗಳು ಪತ್ತೆಯಾಗಿದ್ದು, 1,45,843 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 72,38,600 ಪ್ರಕರಣಗಳು ಹಾಗೂ 1,86,773 ಸಾವುಗಳು ವರದಿಯಾಗಿವೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 28,48,377 ಕೇಸ್ಗಳಿದ್ದು, 50,858 ಜನರು ಸಾವನ್ನಪ್ಪಿದ್ದಾರೆ.
ಅಮೆರಿಕ, ಬ್ರೆಜಿಲ್, ಭಾರತದ ಬಳಿಕ ಸಾವಿನ ಸಂಖ್ಯೆಯಲ್ಲಿ ಮೆಕ್ಸಿಕೋ, ಇಂಗ್ಲೆಂಡ್ ಹಾಗೂ ಇಟಲಿ ಕ್ರಮವಾಗಿ 4, 5 ಹಾಗೂ 6ನೇ ಸ್ಥಾನದಲ್ಲಿವೆ. ಒಟ್ಟು 218 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
![Worldover corona cases and deaths](https://etvbharatimages.akamaized.net/etvbharat/prod-images/9954542_global.jpg)
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 86,852 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.