ಆಂಧ್ರಪ್ರದೇಶ: ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ರದ್ದಾದ ಹಳೆಯ ನೋಟುಗಳನ್ನು ಏನು ಮಾಡಬೇಕೆಂಬುದರ ಬಗ್ಗೆ ದ್ವಂದ್ವಾರ್ಥತೆ ಉಂಟಾಗಿದೆ. 1.8 ಲಕ್ಷ ರೂ ಬೆಲೆಯ 1000 ನೋಟುಗಳು ಮತ್ತು 6.34 ಲಕ್ಷ ಬೆಲೆಯ 500 ರೂ.ಗಳ ನೋಟು ಇದ್ದು, ಒಟ್ಟು ಮೌಲ್ಯ 49.70 ಕೋಟಿಯಾಗಿದೆ.
ಈ ನಿಟ್ಟಿನಲ್ಲಿ ಟಿಟಿಡಿ ಟ್ರಸ್ಟ್ ಬೋರ್ಡ್ನ ಮಾಜಿ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಾಲ್ಕು ಬಾರಿ ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರ ಹಣಕಾಸು ಸಚಿವಾಲಯ ಮತ್ತು ರಿಸರ್ವ್ ಬ್ಯಾಂಕ್‌ಗೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದಾರೆ. ನೇರವಾಗಿ ಮನವಿ ಮಾಡಿದರೂ ಸಹ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ.
ಯಾತ್ರಿಕರು ನೀಡಿದ ರದ್ದಾದ ಕರೆನ್ಸಿ ನೋಟುಗಳನ್ನು ಏನು ಮಾಡಬೇಕೆಂದು ಟಿಟಿಡಿಗೆ ತಿಳಿಯುತ್ತಿಲ್ಲ. ಇತ್ತೀಚಿನ ಟಿಟಿಡಿ ಮಂಡಳಿ ಸಭೆಯಲ್ಲಿ ವೈ.ವಿ.ಸುಬ್ಬಾ ರೆಡ್ಡಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರವು ಈ ವಿಷಯವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.