ಛತ್ತೀಸ್ಗಡ: ಶನಿವಾರದಿಂದ ಪ್ರಾರಂಭವಾದ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಒಟ್ಟು 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇಂದು ಅವರ ಪಾರ್ಥಿವ ಶರೀರಗಳನ್ನು ಬಿಜಾಪುರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆೆ.
ಸುಕ್ಮಾ-ಬಿಜಾಪುರ ಗಡಿಯಲ್ಲಿ ನಕ್ಸಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಕೆ ಮಾಡಲಾಗುತ್ತಿದೆ. ಪಾರ್ಥಿವ ಶರೀರದ ಮುಂದೆ, ಕುಟುಂಬಸ್ಥರು ಕಣ್ಣೀರು ಹಾಕುತ್ತಿರುವ ದೃಶ್ಯ ಮನಕಲಕುವಂತಿದೆ.
ಇದನ್ನೂ ಓದಿ: ನಕ್ಸಲ್ ದಾಳಿ.. ಎನ್ಕೌಂಟರ್ ವೇಳೆ ಭದ್ರತಾ ಪಡೆಯ ಶಸ್ತ್ರಾಸ್ತ್ರಗಳ ಲೂಟಿ.. ಹುತಾತ್ಮರಿಗೆ ಗಣ್ಯರ ನಮನ
ಘಟನೆಯ ಬಗ್ಗೆ ಛತ್ತೀಸ್‌ಗಢ ಸಿಎಂ ಭೂಪೇಂದ್ರ ಬಾಗೇಲ್ ಮಾತನಾಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ. ನಕ್ಸಲ್ ಪೀಡಿತ ಪ್ರದೇಶಗಳನ್ನು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ನಿಗ್ರಹಿಸಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.