ನವದೆಹಲಿ: ಜೂನಿಯರ್ ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕುಸ್ತಿಪಟು ಸುಶೀಲ್ ಕುಮಾರ್‌ಗೆ ದೆಹಲಿ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.
ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾದ ಸುಶೀಲ್ ಕುಮಾರ್ ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಇವರನ್ನು ನೋಡುವ ಉದ್ದೇಶದಿಂದ ಮಧ್ಯಂತರ ಜಾಮೀನನ್ನು ಕೋರ್ಟ್ ಮಂಜೂರು ಮಾಡಿದೆ ಎಂದು ವಕೀಲ ಪ್ರದೀಪ್ ರಾಣಾ ತಿಳಿಸಿದ್ದರು.
ಇದನ್ನೂ ಓದಿ: ಜೈಲಿನಲ್ಲಿ ಟಿವಿ ಬೇಕೆಂದು ಬೇಡಿಕೆಯಿಟ್ಟ ಕೊಲೆ ಆರೋಪಿ ಕುಸ್ತಿಪಟು ಸುಶೀಲ್ ಕುಮಾರ್!
ಪತ್ನಿ ಸವಿ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಈ ಕಠಿಣ ಸಮಯದಲ್ಲಿ ಅವರನ್ನು ಭೇಟಿಯಾಗಲು ಸುಶೀಲ್ ಕುಮಾ್ರ್ ಇಚ್ಛಿಸಿದ್ದರು. ನ್ಯಾಯಾಲಯವು ಈ ವಿಷಯವನ್ನು ಆಲಿಸಿ, ಜಾಮೀನಿಗೆ ಅನುಮತಿ ನೀಡಿದೆ ಎಂದು ವಿವರಿಸಿದರು.
ಸದ್ಯ ಸುಶೀಲ್ ಕುಮಾರ್ ತಿಹಾರ್ ಜೈಲಿನಲ್ಲಿದ್ದು, ಜೂನಿಯರ್ ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಒಟ್ಟಾರೆ 18 ಮಂದಿಯನ್ನು ಬಂಧಿಸಲಾಗಿದೆ. ಜೊತೆಗೆ ದೆಹಲಿ ಪೊಲೀಸರ ಅಪರಾಧ ವಿಭಾಗವು ಸುಶೀಲ್ ಕುಮಾರ್ ಮತ್ತು ಇತರರ ವಿರುದ್ಧ ಎರಡು ಆರೋಪಪಟ್ಟಿಗಳನ್ನೂ ಸಲ್ಲಿಸಿದೆ. ಈ ಕೊಲೆ ಪ್ರಕರಣದ ವಿಚಾರಣೆಯು ರೋಹಿಣಿ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ಇದನ್ನೂ ಓದಿ: ತಿಹಾರ್ ಜೈಲಿನಲ್ಲಿರುವ ಕೈದಿಗಳಿಗೆ ತರಬೇತಿ ನೀಡುತ್ತಿರುವ ಕುಸ್ತಿಪಟು ಸುಶೀಲ್ ಕುಮಾರ್