ETV Bharat / bharat

ಯಾಸ್ ಚಂಡಮಾರುತ ಎಫೆಕ್ಟ್ ​: ಬಂಗಾಳದಲ್ಲಿ ಭಾರೀ ಮಳೆ ; ಎನ್​ಡಿಆರ್​ಎಫ್ ಸಿಬ್ಬಂದಿ ನಿಯೋಜನೆ!

ಯಾಸ್​ ಚಂಡಮಾರುತದ ಅಬ್ಬರ ತೀವ್ರವಾಗಿರಲಿದೆ ಎಂಬ ಕಾರಣಕ್ಕೆ ಈಗಾಗಲೇ ಎನ್​ಡಿಆರ್​ಎಫ್, ಕೋಸ್ಟಲ್ ಗಾರ್ಡ್, ಐಎನ್​ಎಸ್​ ಚಿಲಿಕಾಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಸನ್ನದ್ಧರಾಗಿರಲು ಸೂಚಿಸಿದೆ..

author img

By

Published : May 26, 2021, 4:40 PM IST

Yas Hurricane Effect
ಯಾಸ್ ಚಂಡಮಾರುತ ಎಫೆಕ್ಟ್

ಕೋಲ್ಕತಾ : ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಯಾಸ್ ಚಂಡಮಾರುತದ ಆರ್ಭಟ ಹೆಚ್ಚಾಗಿದ್ದು, ಇಂದು ಮಧ್ಯಾಹ್ನ ಒಡಿಶಾದ ಕರಾವಳಿ ತೀರಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಿದೆ.

ಗಂಟೆಗೆ 155 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕರಾವಳಿ ತೀರದ ಯಾರೊಬ್ಬರು ಕೂಡ ಮನೆಯಿಂದ ಹೊರಗೆ ಬಾರದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಒಡಿಶಾದಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದಲೇ ಭೂಕುಸಿತ ಆರಂಭವಾಗಿದ್ದು, ಇಂದು ಮಧ್ಯಾಹ್ನ ಉತ್ತರ ಒಡಿಶಾವನ್ನು ಹಾದುಹೋಗಿರುವ ಯಾಸ್ ಚಂಡಮಾರುತದ ಅಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ದಕ್ಷಿಣ ಬಂಗಾಳದ ಕೋಲ್ಕತಾದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಪ್ರಾರಂಭವಾಗಿದ್ದು, ಪಶ್ಚಿಮ ಮಿಡ್ನಾಪೋರ್, ಬಂಕುರಾ, ಪುರುಲಿಯಾ ಮತ್ತು ನಾಡಿಯಾದಲ್ಲಿ ಮಳೆ ಸುರಿದಿದೆ. ಮುಂದಾಗುವ ಸಂಭವನೀಯ ಸಮಸ್ಯೆಗಳನ್ನು ಎದುರಿಸಲು ಪಶ್ಚಿಮ ಬಂಗಾಳದ 10 ಜಿಲ್ಲೆಗಳಲ್ಲಿ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭೂಕುಸಿತ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು ಮೂರು ಗಂಟೆ ತೆಗೆದುಕೊಳ್ಳುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳದಲ್ಲಿ ಭಾರೀ ಮಳೆ

"ಇದು ಮುಂದಿನ 3 ಗಂಟೆಗಳಲ್ಲಿ ಉತ್ತರ ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯ ಬಾಲಾಸೋರ್‌ನ ದಕ್ಷಿಣಕ್ಕೆ ದಾಟಲಿದ್ದು, ಗಂಟೆಗೆ ಸರಾಸರಿ 130 ರಿಂದ 155 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ" ಎಂದು ಎಂಇಟಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತಾ ಮತ್ತು ಸುತ್ತಮುತ್ತಲಿನ ಎಲ್ಲೋ ಸುಂಟರಗಾಳಿಯ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಿದ್ದು, ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ನಡುವೆ ಜನರು ಮನೆಯಲ್ಲಿಯೇ ಇರುವಂತೆ ವಿನಂತಿಸಿದ್ದಾರೆ. ಆದರೆ, ಈ ಬಗ್ಗೆ ಹವಾಮಾನ ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.

ವಿವಿಧ ಜಿಲ್ಲೆಗಳಿಂದ 11 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು, ಈ ಪೈಕಿ ಕೇವಲ 3.9 ಲಕ್ಷ ಜನರು ಪೂರ್ವ ಮಿಡ್ನಾಪೋರ್ ಜಿಲ್ಲೆಯವರು ಎಂಬುದು ತಿಳಿದು ಬಂದಿದೆ.

ಯಾಸ್​ ಚಂಡಮಾರುತದ ಅಬ್ಬರ ತೀವ್ರವಾಗಿರಲಿದೆ ಎಂಬ ಕಾರಣಕ್ಕೆ ಈಗಾಗಲೇ ಎನ್​ಡಿಆರ್​ಎಫ್, ಕೋಸ್ಟಲ್ ಗಾರ್ಡ್, ಐಎನ್​ಎಸ್​ ಚಿಲಿಕಾಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಸನ್ನದ್ಧರಾಗಿರಲು ಸೂಚಿಸಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಒರಿಸ್ಸಾದಲ್ಲಿ 28 ಎನ್​ಡಿಆರ್​ಎಫ್ ತಂಡಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 32 ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ಓದಿ: "ನನ್ನನ್ನು ಅರೆಸ್ಟ್​ ಮಾಡುವವರು ಅಧಿಕಾರದಲ್ಲಿಲ್ಲ": ಬಾಬಾ ಮತ್ತೊಂದು ವಿಡಿಯೋ ವೈರಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.