ETV Bharat / bharat

ಕಾರುಗಳಲ್ಲಿ ಬಂದ ದುಷ್ಕರ್ಮಿಗಳಿಂದ 100 ಸುತ್ತು ಗುಂಡಿನ ದಾಳಿ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ರೋಹಿತ್ ಗುಂಡಿಯಾನಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಳಿಕ ಇಡೀ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಹೇರಲಾಗಿದೆ. ಸ್ಥಳದಲ್ಲಿ ಗುಂಡುಗಳು ಪತ್ತೆಯಾಗಿವೆ.

yamunanagar-sudhail-village-firing-cctv-video
ಕಾರುಗಳಲ್ಲಿ ಬಂದ ದುಷ್ಕರ್ಮಿಗಳಿಂದ 100 ಸುತ್ತು ಗುಂಡಿನ ದಾಳಿ
author img

By

Published : Jun 17, 2021, 8:04 PM IST

ಯಮುನನಗರ (ಹರಿಯಾಣ): ಯಮುನನಗರದ ಸುಧೈಲ್ ಪ್ರದೇಶದಲ್ಲಿ ತಡರಾತ್ರಿ ಗುಂಡಿನ ಸದ್ದು ಕೇಳಿಬಂದಿದೆ. ರಾತ್ರಿ 1 ಗಂಟೆ ಸುಮಾರಿಗೆ ಬರೋಬ್ಬರಿ 100 ಸುತ್ತಿನ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾಡ್ವಾ ನಿವಾಸಿ ವಿಪಿನ್ ಮಹಂತ್ ಮತ್ತು ಆತನ ಸಹಚರರು ಸುಧೈಲ್ ನಗರ ನಿವಾಸಿ ಸಚಿನ್ ಪಂಡಿತ್ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ.

ಸಚಿನ್ ಪಂಡಿತ್​ರನ್ನು ಭೇಟಿಯಾಗಲು ಬಂದಿದ್ದ ರೋಹಿತ್ ಗುಂಡಿಯಾನ ಎಂಬುವರನ್ನು ಗುರಿಯಾಗಿಸಿಟ್ಟುಕೊಂಡು ದಾಳಿ ನಡೆಸಲಾಗಿದೆ. ಘಟನೆಯಲ್ಲಿ ರೋಹಿತ್ ಗುಂಡಿಯಾನಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಳಿಕ ಇಡೀ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಹೇರಲಾಗಿದೆ. ಸ್ಥಳದಲ್ಲಿ ಗುಂಡುಗಳು ಪತ್ತೆಯಾಗಿವೆ.

ಕಾರುಗಳಲ್ಲಿ ಬಂದ ದುಷ್ಕರ್ಮಿಗಳಿಂದ 100 ಸುತ್ತು ಗುಂಡಿನ ದಾಳಿ

ಸದ್ಯ ತಡರಾತ್ರಿ ನಡೆದಿರುವ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಮೂರು-ನಾಲ್ಕು ಕಾರುಗಳಲ್ಲಿ ಆಗಮಿಸಿದ್ದ ಬಂದೂಕು ಹೊಂದಿದ್ದ ದುಷ್ಕರ್ಮಿಗಳು ದಾಳಿ ಮಾಡಿರುವುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಐವರನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಲಾದ 2 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಓದಿ: ಎನ್‌ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ಜೂ.28ರ ವರೆಗೆ ಎನ್‌ಐಎ ವಶಕ್ಕೆ ನೀಡಿದ ಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.