ETV Bharat / bharat

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರ ಯೋಗಾಯೋಗ- ವಿಡಿಯೋ ನೋಡಿ - Etv Bharat Kannada

9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಇಂದು ವಿಶ್ವದೆಲ್ಲೆಡೆ ವಸುಧೈವ ಕುಟುಂಬಕಂ ಎಂಬ ಧ್ಯೇಯದೊಂದಿಗೆ ಆಚರಿಸಲಾಯಿತು. ಭಾರತದ ಅತಿ ವೇಗದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿಯೂ ಪ್ರಯಾಣಿಕರು ಯೋಗ ಪ್ರದರ್ಶನ ಮಾಡಿ ಗಮನ ಸೆಳೆದರು.

Passengers perform Yoga on Bhopal Delhi Vande Bharat Express
ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರ ಯೋಗಾಯೋಗ
author img

By

Published : Jun 21, 2023, 4:00 PM IST

ನವದೆಹಲಿ: ಭಾರತ ಸೇರಿ ಪ್ರಪಂಚಾದ್ಯಂತ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ. ಗಣ್ಯರು, ಪ್ರಮುಖರು ಹಾಗೂ ಉತ್ಸಾಹಿ ಯೋಗಪಟುಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ವಿವಿಧ ಯೋಗಾಸನಗಳನ್ನು ಮಾಡಿದ್ದಾರೆ. ಇದರ ಭಾಗವಾಗಿ ಮಧ್ಯಪ್ರದೇಶದ ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿಯೂ ಪ್ರಯಾಣಿಕರು ಯೋಗ ಪ್ರದರ್ಶಿಸಿದರು.

ಇಂದು ಬೆಳಗ್ಗೆ ಭೋಪಾಲ್​ನಿಂದ ದೆಹಲಿಗೆ ಸಂಚರಿಸುತ್ತಿದ್ದ ರೈಲಿನ ಪ್ರತಿಯೊಂದು ಬೋಗಿಯಲ್ಲೂ ಪ್ರಯಾಣಿಕರು ಯೋಗಾಸನಗಳನ್ನು ಮಾಡಿದ್ದಾರೆ. ಯೋಗಗುರು ಕೃಷ್ಣಕಾಂತ್ ಮಿಶ್ರಾ ಅವರು ಪ್ರಯಾಣಿಕರಿಗೆ ವಿವಿಧ ಯೋಗಾಸನಗಳ ಕುರಿತು ಮಾರ್ಗದರ್ಶನ ನೀಡಿದರು. ವಂದೇ ಭಾರತ್‌ ರೈಲಿನಲ್ಲಿ ಪ್ರಯಾಣಿಕರೊಂದಿಗೆ ಕುಳಿತುಕೊಳ್ಳುವ ಭಂಗಿಯಲ್ಲಿ ಕೆಲವು ಯೋಗಾಸನಗಳನ್ನು ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನದ ಸಂದೇಶ ಸಾರಲಾಯಿತು ಎಂದು ಕೃಷ್ಣಕಾಂತ್​ ಮಿಶ್ರಾ ತಿಳಿಸಿದರು. ಅಲ್ಲದೇ, ಪ್ರತಿಯೊಬ್ಬರೂ ಯೋಗವನ್ನು ಜೀವನದ ಭಾಗವನ್ನಾಗಿ ಅವಳಡಿಸಿಕೊಳ್ಳುವಂತೆಯೂ ಅವರು ಕರೆ ಕೊಟ್ಟರು.

ಜಬಲ್‌ಪುರ ಜಿಲ್ಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಮಧ್ಯಪ್ರದೇಶದ ರಾಜ್ಯಪಾಲ ಮಂಗೂಭಾಯ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್, ಸರ್ಬಾನಂದ ಸೋನೋವಾಲ್ ಮತ್ತು ಇತರ ಪ್ರಮುಖರು ಭಾಗವಹಿಸಿದ್ದರು.

ಸೇನಾ ಶಿಬಿರದಲ್ಲಿ ಶ್ವಾನದಿಂದ ಯೋಗ: ಮತ್ತೊಂದೆಡೆ, ಜಮ್ಮು ಮತ್ತು ಕಾಶ್ಮೀರದ ಉಧಂಪುರದ ಸೇನಾ ಶಿಬಿರದಲ್ಲಿ ಯೋಗ ದಿನ ಆಚರಿಸಲಾಯಿತು. ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ, ಐಟಿಬಿಪಿಯ ಸದಸ್ಯ ಶ್ವಾನ ಕೂಡ ಯೋಗದಲ್ಲಿ ಪಾಲ್ಗೊಂಡು ವಿಶೇಷವಾಗಿ ಗಮನ ಸೆಳೆಯಿತು.

ಯೋಧರ ತಂಡದಲ್ಲಿ ಸೇರಿಕೊಂಡ ಶ್ವಾನವು ತನ್ನ ಮುಂಭಾಗದ ಎರಡು ಕಾಲುಗಳನ್ನು ಮುಂಚಾಚಿ ಬಾಗಿದ ಸ್ಥಿತಿಯಲ್ಲಿ ಯೋಗ ಪ್ರದರ್ಶಿಸಿತು. ಅಲ್ಲದೇ, ಶ್ವಾನವು ನೆಲದ ಮೇಲೆ ಉರುಳುತ್ತಾ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ತಾನೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಯತ್ನಿಸಿತು. ಇದರ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಐಟಿಬಿಪಿ ಡೆಪ್ಯುಟಿ ಕಮಾಂಡೆಂಟ್ ಗೌರವ್ ಷಾ, "ಪೊಲೀಸ್ ಸಿಬ್ಬಂದಿಯಂತೆ ಶ್ವಾನಗಳು ಸಹ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಅವುಗಳನ್ನು ಯೋಗ ಶಿಬಿರದಲ್ಲಿ ಸೇರಿಸಿಕೊಳ್ಳಲಾಗುತ್ತದೆ. ಶ್ವಾನಗಳು ಕಾನೂನು ಮತ್ತು ಸುವ್ಯವಸ್ಥೆ ಕರ್ತವ್ಯದ ಭಾಗ. ಆದ್ದರಿಂದ ಪೊಲೀಸ್ ಸಿಬ್ಬಂದಿಯ ಯೋಗ ವೇಳಾಪಟ್ಟಿಯಲ್ಲಿ ಅವುಗಳ ಕಡ್ಡಾಯವಾಗಿ ಭಾಗಿಯಾಗುತ್ತವೆ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Video: ಉಪರಾಷ್ಟ್ರಪತಿ ಧನಕರ್ ಸೇರಿ ಗಣ್ಯರಿಂದ ಯೋಗ ದಿನ ಆಚರಣೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.