ಲಖನೌ(ಉತ್ತರ ಪ್ರದೇಶ): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಂತಿಮ ವರ್ಷದ ಪದವಿ ಓದುತ್ತಿರುವ ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಮತ್ತು ಟ್ಯಾಬ್‌ಗಳನ್ನು ವಿತರಿಸಿದ್ದಾರೆ.
ಲಖನೌದಲ್ಲಿರುವ ಏಕನಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಮತ್ತು ಟ್ಯಾಬ್‌ಗಳನ್ನು ಹಸ್ತಾಂತರ ಮಾಡಿದ್ದು, ಈ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಕಷ್ಟು ವಿದ್ಯಾರ್ಥಿಗಳು ಆಗಮಿಸಿದ್ದರು.
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅವರ ತಾಂತ್ರಿಕ ಕೌಶಲ್ಯಗಳನ್ನು ಹೆಚ್ಚಿಸಲು ಸೆಲ್ ಫೋನ್ ಮತ್ತು ಟ್ಯಾಬ್‌ಗಳನ್ನು ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ ಕನಿಷ್ಠ 60 ಸಾವಿರ ಮೊಬೈಲ್ ಫೋನ್ ಮತ್ತು 40 ಟ್ಯಾಬ್‌ಗಳನ್ನು ವಿತರಣೆ ಮಾಡಲಾಗಿದೆ. ಇಷ್ಟು ದೊಡ್ಡ ಮೊತ್ತದಲ್ಲಿ ಮೊಬೈಲ್ ಫೋನ್ ಮತ್ತು 40,000 ಟ್ಯಾಬ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಬಹುಶಃ ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಫೋನ್, ಟ್ಯಾಬ್ ವಿತರಣೆ ಮಾಡಿದ ಕಾರ್ಯಕ್ರಮ ಈವರೆಗೂ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಯೋಜನೆಯ ಮೊದಲ ಹಂತದಲ್ಲಿ ಎಂಎ, ಬಿಎಸ್ಸಿ, ಎಂಬಿಬಿಎಸ್, ಎಂಡಿ, ಬಿಟೆಕ್, ಎಂಟೆಕ್, ಪಿಎಚ್‌ಡಿ ಮತ್ತು ಇತರ ಕೌಶಲ್ಯ ಅಭಿವೃದ್ಧಿ ಕೋರ್ಸ್ಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ಮತ್ತು ಟ್ಯಾಬ್ ನೀಡಲಾಗಿದೆ.
ಡಿಜಿ ಶಕ್ತಿ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿರುವ ಸುಮಾರು 38 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, ಅವರು ಈ ಯೋಜನೆ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯ ವಿಶೇಷ ಕಾರ್ಯದರ್ಶಿ ಕುಮಾರ್ ವಿನಿತ್ ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ಬ್ರಾಂಡೆಡ್ ಕಂಪನಿಗಳಾದ ಲಾವಾ, ಸ್ಯಾಮ್ ಸಂಗ್, ಏಸರ್ ಮೊಬೈಲ್ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಪಿಯೂಷ್ ಜೈನ್ ಮನೆಯಲ್ಲಿ ಸಿಕ್ಕಿದ್ದು 150 ಕೋಟಿ ಅಲ್ಲ..ಬರೋಬ್ಬರಿ 177 ಕೋಟಿ ರೂ. ನಗದು: ಇಂದೂ ದಾಳಿ ಮುಂದುವರಿಕೆ