ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇವರ ಜೊತೆಗೆ 50 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಯೋಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಭಾರತೀಯ ಜನತಾ ಪಾರ್ಟಿ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವ ಕಸರತ್ತು ನಡೆಸಿದೆ. ಸಚಿವರ ಹೆಸರು ಅಂತಿಮಗೊಳಿಸುವ ಉದ್ದೇಶದಿಂದ ಯೋಗಿ ಆದಿತ್ಯನಾಥ್ ನಿನ್ನೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಅನೇಕ ಸುತ್ತಿನ ಮಾತುಕತೆ ನಡೆಸಿದ್ದರು.
-
Inside lucknow’s Atal Bihari Vajpayee Stadium where the @myogiadityanath 2.0 swearing in will happen tomorrow … pic.twitter.com/dWcEoqDOKb
— Alok Pandey (@alok_pandey) March 24, 2022 " class="align-text-top noRightClick twitterSection" data="
">Inside lucknow’s Atal Bihari Vajpayee Stadium where the @myogiadityanath 2.0 swearing in will happen tomorrow … pic.twitter.com/dWcEoqDOKb
— Alok Pandey (@alok_pandey) March 24, 2022Inside lucknow’s Atal Bihari Vajpayee Stadium where the @myogiadityanath 2.0 swearing in will happen tomorrow … pic.twitter.com/dWcEoqDOKb
— Alok Pandey (@alok_pandey) March 24, 2022
ಸಮಾರಂಭದಲ್ಲಿ ಗಣ್ಯಾತಿಗಣ್ಯರು: ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಲಿದ್ದಾರೆ. ಉಳಿದಂತೆ ದೇಶದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿರುವ ಎಲ್ಲ ರಾಜ್ಯದ ಸಿಎಂಗಳಿಗೂ ಆಹ್ವಾನ ನೀಡಲಾಗಿದ್ದು, ಈ ಪೈಕಿ ಕೆಲವರು ಭಾಗಿಯಾಗುವ ಸಾಧ್ಯತೆ ಇದೆ.
ಬಾಲಿವುಡ್ ಮಂದಿಗೂ ಆಹ್ವಾನ: ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸಮಾರಂಭದಲ್ಲಿ ಅನೇಕ ಬಾಲಿವುಡ್ ನಟರು ಭಾಗಿಯಾಗಲಿದ್ದಾರೆ. ಪ್ರಮುಖವಾಗಿ ಅಕ್ಷಯ್ ಕುಮಾರ್, ಕಂಗನಾ ರಣಾವತ್, ಬೋನಿ ಕಪೂರ್ ಪಾಲ್ಗೊಳ್ಳಲಿದ್ದು, ದಿ ಕಾಶ್ಮೀರಿ ಫೈಲ್ಸ್ ಚಿತ್ರತಂಡಕ್ಕೂ ಆಹ್ವಾನ ನೀಡಲಾಗಿದೆ.