ನವದೆಹಲಿ: ಉತ್ತರಪ್ರದೇಶದಲ್ಲಿ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿವೆ. ನಾಯಕತ್ವದ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಉತ್ತರಪ್ರದೇಶಕ್ಕೆ ಭೇಟಿ ನೀಡಿ ಎಲ್ಲರೊಂದಿಗೆ ಚರ್ಚೆ ನಡೆಸಿ, ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದು ಹೇಳಿದ್ದರು.
-
Uttar Pradesh CM Yogi Adityanath met Union Home Minister Amit Shah in Delhi today. pic.twitter.com/VDpZz4KCth
— ANI (@ANI) June 10, 2021 " class="align-text-top noRightClick twitterSection" data="
">Uttar Pradesh CM Yogi Adityanath met Union Home Minister Amit Shah in Delhi today. pic.twitter.com/VDpZz4KCth
— ANI (@ANI) June 10, 2021Uttar Pradesh CM Yogi Adityanath met Union Home Minister Amit Shah in Delhi today. pic.twitter.com/VDpZz4KCth
— ANI (@ANI) June 10, 2021
ಈ ಎಲ್ಲ ಬೆಳವಣಿಗೆಗಳ ನಡುವೆ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾತುಕತೆ ಬೆಳವಣಿಗೆಗಳ ಬಗ್ಗೆ ಯಾವುದೇ ಮಾಹಿತಿ ಸಿಗದಿದ್ದರೂ, ಇಬ್ಬರ ಭೇಟಿ ತೀವ್ರ ಕುತೂಹಲವನ್ನ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಂತರ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.
ಇಂದು ದೆಹಲಿಗೆ ಆಗಮಿಸಿರುವ ಯೋಗಿ ಆದಿತ್ಯನಾಥ್ ಎರಡು ದಿನಗಳ ಕಾಲ ದೆಹಲಿಯಲ್ಲಿ ಇರಲಿದ್ದಾರೆ. ಈ ಸಂದರ್ಭದಲ್ಲಿ ಮೊದಲಿಗೆ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಾಳೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವ ಸಾಧ್ಯತೆಯಿದೆ.
ಕೊರೊನಾ ವೈರಸ್ ನಿರ್ವಹಣೆಯಲ್ಲಿ ಉತ್ತರಪ್ರದೇಶ ಸರ್ಕಾರ ಹಿನ್ನೆಡೆ ಅನುಭವಿಸಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಕೆಲ ಬಿಜೆಪಿ ಶಾಸಕರು ಹಾಗೂ ಸಂಸದರೇ ಸಾರ್ವಜನಿಕವಾಗಿ ಸಿಎಂ ಯೋಗಿ ಆದಿತ್ಯನಾಥ್ ಅವರ ಕಾರ್ಯನಿರ್ವಹಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.