ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಆರು ತಿಂಗಳವರೆಗೆ ಯಾವುದೇ ಪ್ರತಿಭಟನೆ, ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಎಸ್ಮಾ ಕಾಯ್ದೆ ಜಾರಿಗೊಳಿಸಿದ್ದಾರೆ.
ಈ ಕಾಯ್ದೆಯ ಪ್ರಕಾರ ವಾರಂಟ್ ಇಲ್ಲದೆ ಯಾರನ್ನು ಬೇಕಾದರೂ ಬಂಧಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರವಿರುತ್ತದೆ.
ರಾಜ್ಯ ಸರ್ಕಾರದ ಒಡೆತನದ ಹಾಗೂ ನಿಯಂತ್ರಿಸುವ ಯಾವುದೇ ಇಲಾಖೆ, ನಿಗಮಗಳು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳು ಪ್ರತಿಭಟನೆ ಮಾಡುವಂತಿಲ್ಲ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ESMA) 1966 ರ ಪ್ರಕಾರ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ ಜೈಲು ಶಿಕ್ಷೆ, ದಂಡ ವಿಧಿಸಬಹುದು ಅಥವಾ ಎರಡೂ ಶಿಕ್ಷೆಯನ್ನು ವಿಧಿಸಲು ಅವಕಾಶವಿದೆ.
ಇದನ್ನೂ ಓದಿ:Cyclone Yaas: ಚಂಡಮಾರುತಕ್ಕೆ ನಲುಗಿದ ಒಡಿಶಾ, ಬಂಗಾಳ.. ಅಲ್ಲಲ್ಲಿ ಭೂ ಕುಸಿತ, ನಾಲ್ವರು ಸಾವು
ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗ್ತಿದೆ.