ETV Bharat / bharat

ಮಾ.24ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ.. 25ರಂದು ಯೋಗಿ ಆದಿತ್ಯನಾಥ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

author img

By

Published : Mar 21, 2022, 8:18 AM IST

Updated : Mar 21, 2022, 8:51 AM IST

ಮಾರ್ಚ್ 25 ರಂದು ಇಕಾನಾ ಸ್ಟೇಡಿಯಂನಲ್ಲಿ ಯೋಗಿ ಆದಿತ್ಯನಾಥ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

Yogi to be elected as leader at MLAs' meet on March 24
ಮಾ.24ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ.. 25ರಂದು ಯೋಗಿ ಆದಿತ್ಯನಾಥ ಸಿಎಂ ಆಗಿ ಪ್ರಮಾಣ ಸಾಧ್ಯತೆ

ಲಖನೌ: ಉತ್ತರ ಪ್ರದೇಶದಲ್ಲಿ ಹೊಸದಾಗಿ ಚುನಾಯಿತರಾದ ಬಿಜೆಪಿ ಶಾಸಕರು ಮಾರ್ಚ್ 24ರಂದು ಸಭೆ ಸೇರಲಿದ್ದಾರೆ. ಅಂದು ಲಖನೌದಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ನಾಯಕನನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಶಾಸಕರು ಯೋಗಿ ಆದಿತ್ಯನಾಥ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಅವರು ರಾಜಭವನಕ್ಕೆ ಭೇಟಿ ನೀಡಿ ಸರ್ಕಾರ ರಚನೆಗೆ ಅವಕಾಶ ಕೇಳಲಿದ್ದಾರೆ.

ಈ ಮೂಲಕ ಅವರು ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಉಪಾಧ್ಯಕ್ಷ ರಘುವರ್ ದಾಸ್ 24ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ವೀಕ್ಷಕರಾಗಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ಯೋಗಿ ಆದಿತ್ಯನಾಥ್ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಔಪಚಾರಿಕವಾಗಿ ಆಯ್ಕೆಯಾದ ನಂತರ, ರಾಜಭವನಕ್ಕೆ ತೆರಳಿ ಔಪಚಾರಿಕವಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.

ನಂತರ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಯೋಗಿ ಆದಿತ್ಯನಾಥರಿಗೆ ಸರ್ಕಾರ ರಚಿಸಲು ಆಹ್ವಾನ ನೀಡಲಿದ್ದಾರೆ. ಮಾರ್ಚ್ 25 ರಂದು ಇಕಾನಾ ಸ್ಟೇಡಿಯಂನಲ್ಲಿ ಯೋಗಿ ಆದಿತ್ಯನಾಥ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

Last Updated : Mar 21, 2022, 8:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.