ETV Bharat / bharat

ಉತ್ತರಪ್ರದೇಶದಲ್ಲಿ ಸಂಪುಟ ರಚನೆ ಕಸರತ್ತು: ಹೈಕಮಾಂಡ್ ಭೇಟಿಯಾಗಲಿರುವ ಸಿಎಂ ಯೋಗಿ - ಬಿಜೆಪಿ ಹೈಕಮಾಂಡ್ ಭೇಟಿ ವೇಳೆ ಸಂಪುಟ ರಚನೆ ಕಸರತ್ತು

ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಸಚಿವರು ಸೋಲನ್ನು ಅನುಭವಿಸಿದ್ದಾರೆ. ಮತ್ತೆ ಹಲವು ಸಚಿವರು ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಸಮರ್ಥ ನಾಯಕರನ್ನು ತುಂಬುವ ಸಲುವಾಗಿ ಚರ್ಚೆ ನಡೆಸಲು ಸಿಎಂ ಯೋಗಿ ಇಂದು ಹೈಕಮಾಂಡ್ ಅನ್ನು ಭೇಟಿಯಾಗಲಿದ್ದಾರೆ..

Yogi to meet BJP top brass in Delhi today for new Cabinet formation
ಉತ್ತರಪ್ರದೇಶದಲ್ಲಿ ಸಂಪುಟ ರಚನೆ ಕಸರತ್ತು: ಹೈಕಮಾಂಡ್ ಭೇಟಿಯಾಗಲಿರುವ ಸಿಎಂ ಯೋಗಿ
author img

By

Published : Mar 11, 2022, 12:55 PM IST

ಲಖನೌ, (ಉತ್ತರಪ್ರದೇಶ) : ಯೋಗಿ ಸರ್ಕಾರ ಉತ್ತರ ಪ್ರದೇಶದಲ್ಲಿ ಕಮಾಲ್ ಮಾಡಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯದ ನಂತರ ಸಿಎಂ ಯೋಗಿ ಆದಿತ್ಯನಾಥ್ ಅವರು ಹೊಸ ಸಚಿವ ಸಂಪುಟದ ಕುರಿತು ಚರ್ಚೆ ನಡೆಸಲು ಹೈಕಮಾಂಡ್ ಅನ್ನು ಭೇಟಿ ಮಾಡಲು ನವದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಚುನಾವಣೆಯಲ್ಲಿ ಸೋಲು ಅನುಭವಿಸಿದ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಉನ್ನತ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದರೆ, ಕೇಶವ ಪ್ರಸಾದ್ ಮೌರ್ಯ ಮತ್ತು ಇತರ ಹಲವಾರು ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಅನ್ನು ಭೇಟಿ ಮಾಡಲು ಇಂದು ದೆಹಲಿಗೆ ಭೇಟಿ ನೀಡಲಿರುವ ಸಿಎಂ ಆದಿತ್ಯನಾಥ್, 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕ್ಯಾಬಿನೆಟ್​ನಲ್ಲಿ ಹೊಸ ಹೊಸ ಮುಖಗಳನ್ನು ಪರಿಚಯಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಚುನಾವಣೆಯಲ್ಲಿ ಸೋತ ನಂತರ, ಈ ಬಾರಿ ಮೂವರು ಉಪಮುಖ್ಯಮಂತ್ರಿಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿಕ್ಷಣ ಸಚಿವ ಸತೀಶ್ ದ್ವಿವೇದಿ, ಗ್ರಾಮೀಣಾಭಿವೃದ್ಧಿ ಸಚಿವ ಮೋತಿ ಸಿಂಗ್, ಮತ್ತೋರ್ವ ಸಚಿವ ಸುರೇಶ್ ರಾಣಾ ಮತ್ತು ಇತರ ಹಲವು ಸಚಿವರು ಚುನಾವಣೆಯಲ್ಲಿ ಸೋತಿದ್ದಾರೆ. ದಾರಾ ಸಿಂಗ್, ಧರಂ ಸಿಂಗ್ ಸೈನಿ ಮತ್ತು ಸ್ವಾಮಿ ಪ್ರಸಾದ್ ಮೌರ್ಯ ಅವರು ಪಕ್ಷವನ್ನು ತೊರೆದ ಕಾರಣದಿಂದ ಆ ಸ್ಥಾನಗಳಿಗೆ ಬದಲಿ ನಾಯಕರ ಅವಶ್ಯಕತೆ ಇದೆ.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋ... ಜೈ ಶ್ರೀರಾಮ್​ ಜತೆ ಭಾರತ್​ ಮಾತಾಕೀ​ ಘೋಷಣೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಕ್ಷದ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಅವರು ಇಂದು ದೆಹಲಿಯಲ್ಲಿ ಹೈಕಮಾಂಡ್​ನೊಂದಿಗೆ ಚರ್ಚೆ ನಡೆಸಿ ನಂತರ, ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳನ್ನು ನಿರ್ಧರಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಮೂಲಗಳು ತಿಳಿಸಿವೆ. ಮಾರ್ಚ್ 14ರಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.