ETV Bharat / bharat

ಲಸಿಕೆ ಪಡೆಯಲು ಭಯ.. ಆತ್ಮಹತ್ಯೆಗೆ ಶರಣಾದ ಯುವಕ

ಭಾನುವಾರ ಬೆಳಗ್ಗೆ ಶವಿ ಪ್ರಕಾಶ್​ ತನ್ನ ಮನೆಯ ಹೊರಗೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದ. ಇದನ್ನು ಕಂಡ ಕುಟುಂಬಸ್ಥರು ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್​ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ..

ಆತ್ಮಹತ್ಯೆಗೆ ಶರಣಾದ ಯುವಕ
ಆತ್ಮಹತ್ಯೆಗೆ ಶರಣಾದ ಯುವಕ
author img

By

Published : Jun 15, 2021, 6:24 PM IST

ಹೈದರಾಬಾದ್ ​: ಕೊರೊನಾ ಲಸಿಕೆ ತೆಗೆದುಕೊಳ್ಳಲು ಒತ್ತಾಯ ಮಾಡಿದ್ದಕ್ಕೆ ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ರಾಯದುರ್ಗ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಸಿಕೆ ಪಡೆಯಲು ತೆಲಂಗಾಣ ಸರ್ಕಾರ ಜಾಗೃತಿ ಕಾರ್ಯಕ್ರಮ ನಡೆಸಿದರೂ ಕೆಲವರಲ್ಲಿ ಇನ್ನೂ ಭಯ ಕಡಿಮೆಯಾಗಿಲ್ಲ ಎಂಬುದುಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಪುರಂನ ಶವಿ ಪ್ರಕಾಶ್ (22) ಮೃತ ವ್ಯಕ್ತಿ. ಈತ ಕೆಲವು ವರ್ಷಗಳ ಹಿಂದೆ ತಮ್ಮ ಕುಟುಂಬದೊಂದಿಗೆ ಹೈದರಾಬಾದ್‌ಗೆ ಬಂದು ಮಣಿಕೊಂಡ ಏರಿಯಾದಲ್ಲಿ ವಾಸವಾಗಿದ್ದ. ಸೆಕ್ಯುರಿಟಿ ಗಾರ್ಡ್ ಆಗಿ ಪ್ರಕಾಶ್​ ಕಾರ್ಯನಿರ್ವಹಿಸುತ್ತಿದ್ದ.

ಕೊರೊನಾ ಪ್ರಕರಣಗಳು ಹೆಚ್ಚಾದ ಸಂದರ್ಭದಲ್ಲಿ ಕುಟುಂಬಸ್ಥರು ಲಸಿಕೆ ಹಾಕಿಸಿಕೊಳ್ಳುವಂತೆ ಈತನಿಗೆ ಒತ್ತಾಯಿಸಿದ್ದಾರೆ. ಆದರೆ, ಲಸಿಕೆ ಹಾಕಿಸಿಕೊಳ್ಳುವ ಭಯದಿಂದ ಆತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಭಾನುವಾರ ಬೆಳಗ್ಗೆ ಶವಿ ಪ್ರಕಾಶ್​ ತನ್ನ ಮನೆಯ ಹೊರಗೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದ. ಇದನ್ನು ಕಂಡ ಕುಟುಂಬಸ್ಥರು ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್​ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.