ಪ್ರಯಾಗ್ರಾಜ್ (ಉತ್ತರ ಪ್ರದೇಶ): ಮತದಾನದ ವೇಳೆ ಶಂಕಿತ ವಸ್ತು ಸ್ಫೋಟಿಸಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಇಂದು ನಡೆದಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ 5ನೇ ಹಂತದ ಮತದಾನ ನಡೆಯುತ್ತಿದೆ. ಪ್ರಯಾಗ್ರಾಜ್ನ ಕರೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೋಟಿಂಗ್ ನಡೆಯುವ ವೇಳೆ ಇಬ್ಬರು ಸೈಕ್ಲಿಸ್ಟ್ಗಳು ಬಿದ್ದಿದ್ದು, ಆಗ ಸ್ಫೋಟ ಸಂಭವಿಸಿದೆ. ಇವರಿಬ್ಬರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : ಮನೆ ಛಿದ್ರ ಛಿದ್ರ-ಗಂಭೀರವಾಗಿ ಗಾಯಗೊಂಡ ದಂಪತಿ!
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಫೋಟಗೊಂಡ ವಸ್ತುವಿನ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.