ಕಟಕ್(ಒಡಿಶಾ): ಅಧಿಕಾರಿಗಳಲ್ಲಿ ಭ್ರಷ್ಟಾಚಾರ ಮತ್ತು ಯುವಕರಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುವನ್ನು ತಡೆಯಬೇಕೆಂದು ಆಗ್ರಹಿಸಿ ಯುವಕನೊಬ್ಬ ಮೊಬೈಲ್ ಟವರ್ ಹತ್ತಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಒಡಿಶಾದ ಕಟಕ್ ಜಿಲ್ಲೆಯ ರಾಮಚಂದ್ರಾಪುರ ಗ್ರಾಮದಲ್ಲಿ ನಡೆದಿದೆ.
ರಾಮಚಂದ್ರಾಪುರ ವಲಯದ ರಂಜನ್ ಎಂಬ ಯುವಕನೇ ಮೊಬೈಲ್ ಟವರ್ ಹತ್ತಿ ಬೆದರಿಕೆ ಹಾಕಿದ ಯುವಕ. ಸಮಾಜದಲ್ಲಿ ಭ್ರಷ್ಟಾಚಾರ ಅಧಿಕವಾಗಿದೆ. ಅಂತಹ ಅಧಿಕಾರಿಗಳಿಗೆ ಕಡಿವಾಣ ಹಾಕಬೇಕು. ಅಲ್ಲದೇ, ನಿರುದ್ಯೋಗಿ ಯುವಕರ ಜೀವನ ಮಟ್ಟವನ್ನು ಸುಧಾರಿಸಬೇಕು. ಇಲ್ಲವಾದಲ್ಲಿ ಟವರ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲಾಗುವುದು ಎಂದು ಬೆದರಿಕೆ ಹಾಕಿದ್ದಾನೆ.
ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯುವಕನನ್ನು ಟವರ್ನಿಂದ ಕೆಳಕ್ಕೆ ಇಳಿಸಲು ಮನವೊಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಓದಿ: ಸ್ಥಗಿತಗೊಂಡ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ