ಕೋಝಿಕ್ಕೋಡ್ : ಮುಂಬರುವ ನಟಿ ಮತ್ತು ರೂಪದರ್ಶಿ ಶಹನಾ (20) ಎಂಬುವರು ಕೋಯಿಕ್ಕೋಡ್‌ನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿ 11.30ರ ಸುಮಾರಿಗೆ ಪರಂಬಿಲ್ ಬಜಾರ್‌ನಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಕಿಟಕಿಯ ಗ್ರಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶಹನಾ ಕಾಸರಗೋಡು ಮೂಲದವರಾಗಿದ್ದಾರೆ. ಅವರ ಸಾವಿನ ಬಗ್ಗೆ ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಕೆಯ ಪತಿ ಸಜ್ಜದ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.
ಇದನ್ನೂ ಓದಿ: ಕಪ್ಪು ಗಾಜಿನ ಕಾರೊಳಗೆ ಯುವತಿ ಮೇಲೆ ಗ್ಯಾಂಗ್‌ರೇಪ್; ಮಹಿಳಾ ಡಿಎಸ್ಪಿ ಕೈಗೆ ಸಿಕ್ಕಿಬಿದ್ದ ವಿದ್ಯಾವಂತರು!