ETV Bharat / bharat

Gang rape: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ.. ನಾಲ್ವರು ಆರೋಪಿಗಳ ಬಂಧನ - Arrest of four accused

Gang rape of young woman: ಬಾರ್​ನಲ್ಲಿ ನೃತ್ಯಗಾರ್ತಿ ಆಗಿರುವ ಯುವತಿಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.

Gang rape of young woman
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಆರೋಪಿಗಳ ಬಂಧನ
author img

By ETV Bharat Karnataka Team

Published : Sep 5, 2023, 7:21 AM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಉತ್ತರ 24 ಪರಗಣದ ಅಶೋಕ್ ನಗರ ಪ್ರದೇಶದಲ್ಲಿ ಖಾಲಿ ಮನೆಗೆ ಕರೆದೊಯ್ದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ಭಾನುವಾರ ರಾತ್ರಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆ ಕೋಲ್ಕತ್ತಾದ ಬಾರ್‌ನಲ್ಲಿ ಡ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ರಾತ್ರಿ, ನಾಲ್ವರು ಯುವಕರು ಆಕೆಯನ್ನು ಖಾಲಿ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಬಳಿಕ ಸಂತ್ರಸ್ತೆಯನ್ನು ರಸ್ತೆಬದಿಯಲ್ಲಿಯೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ನಂತರ ಅಶೋಕ್ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತನ್ಮಯ್ ಪಾಲ್, ಆಕಾಶ್ ಚಕ್ರವರ್ತಿ, ತುಕೈ ಸಿಕ್ದರ್ ಮತ್ತು ಗೋಪಾಲ್ ಪಾಲ್ ಎಂದು ಪೊಲೀಸರು ಗುರುತಿಸಿದ್ದಾರೆ. ಬಂಧಿತರು ಅಶೋಕ್​ ನಗರ ಸುಭಾಷ್ ಪಲ್ಲಿಯ ನಿವಾಸಿಗಳಾಗಿದ್ದಾರೆ.

ಪೊಲೀಸರು ಹೇಳಿದ್ದೇನು?: ಪೊಲೀಸ್ ಮೂಲಗಳ ಪ್ರಕಾರ, ಭಾನುವಾರ ರಾತ್ರಿ ಅಶೋಕ್ ನಗರ ಪ್ರದೇಶದ ಜೆಸ್ಸೋರ್ ರಸ್ತೆಯ ಬದಿಯಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನು ರಕ್ಷಿಸಲಾಗಿದೆ. ಬಳಿಕೆ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ತನಗೆ ವೈಯಕ್ತಿಕ ಸಮಸ್ಯೆ ಇದ್ದು, ಅದಕ್ಕೆ ಹಣದ ಅವಶ್ಯಕತೆ ಇದೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಭಾನುವಾರ ಮಧ್ಯಾಹ್ನ, ಆಕೆಯ ಪರಿಚಯಸ್ಥನಾದ ಆಕಾಶ್ ವಾಕಿಂಗ್ ಹೋಗೋಣವೆಂದು ಹೇಳಿದ್ದ ಮತ್ತು ಹಣದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದನು. ಹೀಗಾಗಿ ಸಂತ್ರಸ್ತೆ ಆಕಾಶ್‌ನನ್ನು ಭೇಟಿಯಾಗಿದ್ದಳು.

ಕುಡಿದ ಮತ್ತಿನಲ್ಲಿ ಅತ್ಯಾಚಾರವೆಸಗಿರುವ ಆರೋಪ: ಅಶೋಕ್ ನಗರದಲ್ಲಿರುವ ತುಕೈ ಸಿಕ್ದರ್‌ಗೆ ಸೇರಿದ ಖಾಲಿ ಮನೆಗೆ ಆಕಾಶ್ ಆಕೆಯನ್ನು ಕರೆದೊಯ್ದಿದ್ದಾನೆ ಎಂದು ಆರೋಪಿಸಲಾಗಿದೆ. ನಾಲ್ವರೂ ಸೇರಿ ಮದ್ಯ ಸೇವಿಸಿ ಸಂತ್ರಸ್ತೆಯನ್ನು ಪ್ರಜ್ಞಾಹೀನಗೊಳಿಸಿದ್ದಾರೆ. ನಾಲ್ವರು ಯುವಕರು ಕುಡಿದ ಮತ್ತಿನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ನಂತರ ನಾಲ್ವರು ಯುವಕರು ಯುವತಿಯನ್ನು ಖಾಸಗಿ ಕಾಮರ್ಸ್ ಕಾಲೇಜಿನ ಮುಂದೆ ಬಿಟ್ಟು ಪರಾರಿಯಾಗಿದ್ದಾರೆ.

ಆರೋಪಿಗಳಿಗೆ ಐದು ದಿನಗಳವರೆಗೆ ಪೊಲೀಸ್ ಕಸ್ಟಡಿ: ಮಾಹಿತಿ ಪಡೆದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಾದ ನಂತರ ಯುವತಿ ನಾಲ್ವರು ಆರೋಪಿಗಳ ಹೆಸರನ್ನು ಉಲ್ಲೇಖಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಸೋಮವಾರ ಬೆಳಗ್ಗೆ ಅಶೋಕ್ ನಗರ ಸುಭಾಷ್ ಪಲ್ಲಿ ಪ್ರದೇಶದ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸೋಮವಾರ ಅವರನ್ನು ಬರಾಸತ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಮನವಿ ಮಾಡಿದರು. ನ್ಯಾಯಾಲವು ಐದು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಇದನ್ನೂ ಓದಿ: ಮದ್ಯ ಸೇವಿಸಿ ಒಂದೇ ಕುಟುಂಬದ ಮೂವರ ಸಾವು.. ಆಕ್ರಂದನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.