ETV Bharat / bharat

ಅರುಣಾಚಲ ಪ್ರದೇಶದಿಂದ ಯುವಕನನ್ನು ಚೀನಾ ಸೇನೆ ಅಪಹರಿಸಿದೆ : ಸಂಸದ ತಾಪಿರ್ ಗಾವೋ - 17 ವರ್ಷದ ಯುವಕನನ್ನು ಭಾರತದ ಭೂಪ್ರದೇಶದಿಂದ ಅಪಹರಣ ಮಾಡಿದ ಚೀನಾ

ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಿಂದ ಮಂಗಳವಾರ ಯುವಕನನ್ನು ಅಪಹರಿಸಲಾಗಿದೆ ಎಂದು ಪೂರ್ವ ಅರುಣಾಚಲ ಪ್ರದೇಶದ ಸಂಸದ ತಪಿರ್ ಗಾವೊ ಹೇಳಿದ್ದಾರೆ.

ಅರುಣಾಚಲ ಪ್ರದೇಶದಿಂದ ಯುವಕನನ್ನು ಚೀನಾ ಸೇನೆ ಅಪಹರಿಸಿದೆ

author img

By

Published : Jan 20, 2022, 5:24 AM IST

ನವದೆಹಲಿ: 17 ವರ್ಷದ ಯುವಕನನ್ನು ಭಾರತದ ಭೂಪ್ರದೇಶದಿಂದ ಅಪಹರಣ ಮಾಡಲಾಗಿದೆ ಎಂದು ಅರುಣಾಚಲ ಪ್ರದೇಶದ ಸಂಸತ್ ಸದಸ್ಯರೊಬ್ಬರು ಹೇಳಿದ್ದಾರೆ.

ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಿಂದ ಮಂಗಳವಾರ ಯುವಕನನ್ನು ಅಪಹರಿಸಲಾಗಿದೆ ಎಂದು ಪೂರ್ವ ಅರುಣಾಚಲ ಪ್ರದೇಶದ ಸಂಸದ ತಪಿರ್ ಗಾವೊ ಹೇಳಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ತ್ಸಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಯುವಕನನ್ನು ಅಪಹರಿಸಿದೆ ಎಂದು ಅವರು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ತ್ಸಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) 17 ವರ್ಷದ ಯುವಕ ಮಿರಾಮ್ ಟ್ಯಾರೋನ್​ನನ್ನು ಅಪಹರಿಸಿದೆ ಎಂದು ಅವರು ಹೇಳಿದ್ದಾರೆ.ಅವನ ಸ್ನೇಹಿತ ಪಿಎಲ್​ಎ ನಿಂದ ತಪ್ಪಿಸಿಕೊಂಡು ಅಧಿಕಾರಿಗಳಿಗೆ ಈ ಸಂನಂಧ ವರದಿ ಮಾಡಿದ್ದಾನೆ. ಭಾರತ ಸರ್ಕಾರದ ಎಲ್ಲಾ ಏಜೆನ್ಸಿಗಳು ಆತನ ಶೀಘ್ರ ಬಿಡುಗಡೆಗೆ ಕೆಲಸ ಮಾಡಬೇಕು ಎಂದು ವಿನಂತಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗಾವೋ ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭಾರತೀಯ ಸೇನೆಯನ್ನು ಟ್ಯಾಗ್ ಮಾಡಿದ್ದಾರೆ. ಘಟನೆಯ ಬಗ್ಗೆ ಗೃಹ ಸಚಿವಾಲಯಕ್ಕೆ ತಿಳಿಸಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿರುವುದಾಗಿ ಸಂಸದರು ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.