ನವದೆಹಲಿ, ನೋಯ್ಡಾ: ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ಕಟ್ಟಡದ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಭಯಾನಕ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೊಯ್ಡಾದ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಮೃತರ ಹೆಸರು ನಿಧಿ ಮೂರ್ತಿ. ಮಹಾರಾಷ್ಟ್ರ ಮೂಲದ ಈತ ನೊಯ್ಡಾದ ಎಚ್ಸಿಎಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ಫ್ಲಾರೆನ್ಸ್ ಸೀ ಟವರ್‌ನ 9ನೇ ಮಹಡಿಯಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು.
ನಿನ್ನೆ ಬೆಳಗ್ಗೆ ಈತ ಏಕಾಏಕಿ 9ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿದ್ದಾನೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಯನ್ನು ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಮನೆ ತಪಾಸಿಸಿದ ಪೊಲೀಸರಿಗೆ ಯಾವುದೇ ರೀತಿಯ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
ಸಾವಿಗೆ ನಿಖರ ಕಾರಣ ತಿಳಿದಿಲ್ಲವಾದರೂ, ಸ್ನೇಹಿತರ ಪ್ರಕಾರ ಆತ ಕೆಲ ದಿನಗಳಿಂದ ಯಾವುದೋ ಕಾರಣಕ್ಕಾಗಿ ಅಸಮಾಧಾನಗೊಂಡಿದ್ದ ಎಂದು ತಿಳಿಸಿದ್ದಾರೆ.
ಓದಿ: ಕಾರಿನಿಂದ 12 ಕೆಜಿ ಸ್ಫೋಟಕ ವಶಪಡಿಸಿಕೊಂಡ ಪ್ರಕರಣ.. 11 ಉಗ್ರರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ