ETV Bharat / bharat

ಗರ್ಬಾ ನೃತ್ಯ ವೇಳೆ ಯುವಕ ಸಾವು.. ಆಘಾತಕ್ಕೆ ತಂದೆಯೂ ನಿಧನ

author img

By

Published : Oct 3, 2022, 3:53 PM IST

ನೃತ್ಯ ಮಾಡುವಾಗ ಹಠಾತ್​ ಕುಸಿದು ಬಿದ್ದ ಮನೀಶ್ ನಾರಾಪ್ಜಿ ಸೋನಿಗ್ರಾ ಅವರನ್ನು ತಂದೆ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಮಗ ಸಾವನ್ನಪ್ಪಿದ್ದಾರೆ ಎಂದು ಘೋಷಿಸುತ್ತಿದ್ದಂತೆ ತಂದೆ ಕೂಡ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Youth dies while dancing Garba
ಗರ್ಬಾ ನೃತ್ಯ ವೇಳೆ ಯುವಕ ಸಾವು

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ಗರ್ಬಾ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿರುವಾಗ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮಗ ಸಾವನ್ನಪ್ಪಿದ ಸುದ್ದಿ ಕೇಳಿದ ತಂದೆಯೂ ಕೂಡ ಕ್ಷಣಾರ್ಧದಲ್ಲೇ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಭಾನುವಾರದ ಮಧ್ಯರಾತ್ರಿ ವಿರಾರ್‌ನ ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್‌ನಲ್ಲಿ ಗಾರ್ಬಂಟ್‌ನಲ್ಲಿ ನೃತ್ಯ ಮಾಡುವಾಗ ಮನೀಶ್ ನಾರಾಪ್ಜಿ ಸೋನಿಗ್ರಾ ಅವರು ಹಠಾತ್ ಕುಸಿದು ಬಿದ್ದಿದ್ದಾರೆ. ಸೋನಿಗ್ರಾ ಅವರನ್ನು ತಕ್ಷಣವೇ ಅವರ ತಂದೆ ನಾರಾಪ್ಜಿ ಸೋನಿಗ್ರಾ (66) ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ವೈದ್ಯರು ಮಗ ಸಾವನ್ನಪ್ಪಿದ್ದಾರೆ ಎಂದು ಘೋಷಿಸುತ್ತಿದ್ದಂತೆ ತಂದೆ ಕೂಡ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಎರಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಾರ್ಜ್​ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್​ನ ಬ್ಯಾಟರಿ ಸ್ಫೋಟ: 7 ವರ್ಷದ ಬಾಲಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.