ETV Bharat / bharat

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಪಾಟ್ನಾದ ರೈಲ್ವೆ ನಿಲ್ದಾಣದಲ್ಲಿ ಯುವಕನ ಮೇಲೆ ಗುಂಡಿನ ದಾಳಿ - ಪಾಟ್ನಾದ ರೈಲ್ವೆ ನಿಲ್ದಾಣದಲ್ಲಿ ಯುವಕನ ಮೇಲೆ ಗುಂಡಿನ ದಾಳಿ

ಪಾಟ್ನಾದ ಬಿಹ್ತಾ ರೈಲು ನಿಲ್ದಾಣದಲ್ಲಿ ಕ್ಷುಲ್ಲಕ ವಿಚಾರಕ್ಕೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ.

Representative image
ಸಾಂದರ್ಭಿಕ ಚಿತ್ರ
author img

By

Published : Nov 28, 2022, 7:00 AM IST

ಪಾಟ್ನಾ(ಬಿಹಾರ್​): ತತ್ಕಾಲ್ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ವಿಚಾರದಲ್ಲಿ ಗಲಾಟೆಯಾಗಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಪಾಟ್ನಾದ ಬಿಹ್ತಾ ರೈಲು ನಿಲ್ದಾಣದಲ್ಲಿ ಭಾನುವಾರ ಈ ಘಟನೆ ನಡೆದಿದೆ.

ನಿನ್ನೆ ತತ್ಕಾಲ್ ಟಿಕೆಟ್‌ಗಾಗಿ ಬಿಹ್ತಾ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಭಾರಿ ಜನಸಂದಣಿ ಇತ್ತು. ಈ ನಡುವೆ ಕೌಂಟರ್‌ನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ವಿಚಾರದಲ್ಲಿ ಜನರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ, ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡವರನ್ನು ಬಿಹ್ತಾ ನಿವಾಸಿ ಮುದರಿಶ್ ಖಾನ್ (25) ಎಂದು ಗುರುತಿಸಲಾಗಿದೆ . ಘಟನೆಯ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಯುವಕನ ಹೇಳಿಕೆ ತೆಗೆದುಕೊಳ್ಳಲಾಗಿದೆ. ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಬಿಹ್ತಾ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿ ಮುಖೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಹೋದ್ಯೋಗಿಗಳ ನಡುವೆ ಘರ್ಷಣೆ: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಯೋಧರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.