ಸಾತ್ನಾ(ಮಧ್ಯಪ್ರದೇಶ): ಆಘಾತಕಾರಿ ಘಟನೆಯೊಂದರಲ್ಲಿ ಯುವಕನ ಅಪಹರಣ ಮಾಡಿರುವ ದುಷ್ಕರ್ಮಿಗಳ ಗುಂಪು ಆತನ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೆಲವರು ಸೇರಿಕೊಂಡು ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಯುವಕನ ಮೇಲೆ ಚಪ್ಪಲಿ, ಕೋಲುಗಳಿಂದ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಗುಂಪು, ಆತನ ತಲೆಕೂದಲು ಹಿಡಿದು ಎಳೆದಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಮಾಡಿದ್ದಾರೆ.

ಇದನ್ನೂ ಓದಿರಿ: ಗಂಡು ಮಗುವಿಗೆ ಜನ್ಮ ನೀಡಿದ ಟಿಎಂಸಿ ಸಂಸದೆ ನುಸ್ರತ್ ಜಹಾನ್!
ಆಗಸ್ಟ್ 15ರಂದು ನಡೆದಿರುವ ಘಟನೆ ಇದಾಗಿದೆ ಎನ್ನಲಾಗಿದ್ದು, ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಯಾವ ವಿಚಾರಕ್ಕಾಗಿ ಆತನ ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದಾರೆ ಎಂಬುದರ ಕುರಿತು ಇಲ್ಲಿಯವರೆಗೆ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.